
ರಾಂಚಿ[ಅ.02]: ಅನಿರ್ದಿಷ್ಟಾವಧಿ ಸಮಯದವರೆಗೆ ಮೀಸಲು ಸೌಲಭ್ಯ ವಿಸ್ತರಣೆಗೊಳ್ಳುತ್ತಿರುವ ಬಗ್ಗೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಪ್ರಶ್ನೆ ಮಾಡಿದ್ದಾರೆ.
ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಮಿತ್ರಾ, ‘ಸಮಾಜದಲ್ಲಿ ಸಾಮಾಜಿಕ ಬದಲಾವಣೆ ತರಲು 10 ವರ್ಷ ಮೀಸಲಿನ ಅಗತ್ಯವಿದೆ ಎಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಸ್ವತಃ ಹೇಳಿದ್ದರು. 10 ವರ್ಷದೊಳಗೆ ಸಮಾನತೆ ಸಾಧಿಸಬೇಕೆಂದು ಅವರು ಬಯಸಿದ್ದರು. ಆದರೆ ಅದು ಸಾಧ್ಯವಾಗಿಲ್ಲ. ಹಾಗಾದರೆ, ನಾವು ಇಂದು ಏನು ಮಾಡುತ್ತಿದ್ದೇವೆ? ನಾವು ಮೀಸಲಾತಿಯನ್ನು ಪ್ರತಿ 10 ವರ್ಷಗಳಿಗೊಮ್ಮೆ ವಿಸ್ತರಿಸುತ್ತಿದ್ದೇವೆ. ಒಂದು ಹಂತದಲ್ಲಿ 20 ವರ್ಷ ವಿಸ್ತರಿಸಲಾಗಿತ್ತು. ಆದರೆ, ಮೀಸಲಾತಿ ಸಮಾಜದಲ್ಲಿ ಸುಧಾರಣೆ ತಂದಿದೆಯೇ’ ಎಂದು ಸುಮಿತ್ರಾ ಪ್ರಶ್ನಿಸಿದ್ದಾರೆ.
ಮೀಸಲಾತಿಯಿಂದ ದೇಶದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ, ಹಳ್ಳಿಗಳಲ್ಲೂ ಮೀಸಲಾತಿಯ ಬಗ್ಗೆ ಯೋಚನೆ ಮಾಡಬೇಕು, ಆಗ ಮಾತ್ರ ಬದಲಾವಣೆ ಸಾಧ್ಯವಾಗಬಹುದು ಎಂದು ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.