ಲೋಕಾಯುಕ್ತರ ಹತ್ಯೆಗೆ ಯತ್ನಿಸಿದ ತೇಜ್ ರಾಜ್ ಶರ್ಮ ಕೊಟ್ಟ ಕಾರಣವೇನು..?

Published : Mar 08, 2018, 10:09 AM ISTUpdated : Apr 11, 2018, 01:02 PM IST
ಲೋಕಾಯುಕ್ತರ ಹತ್ಯೆಗೆ ಯತ್ನಿಸಿದ ತೇಜ್ ರಾಜ್ ಶರ್ಮ ಕೊಟ್ಟ ಕಾರಣವೇನು..?

ಸಾರಾಂಶ

‘ನಾನು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಾಕ್ಷಿ ಸಮೇತ ದೂರು ದಾಖಲಿಸಿದರೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಲಿಲ್ಲ. ಈ ಬೆಳವಣಿಗೆಯಿಂದ ಬೇಸರಗೊಂಡು ಲೋಕಾಯುಕ್ತರಿಗೆ ಚಾಕುವಿನಿಂದ ಇರಿದೆ..!’ ಇದು ಲೋಕಾಯುಕ್ತರ ಮೇಲೆ ಚಾಕುವಿನಿಂದ ದಾಳಿ ನಡೆಸಿರುವ ರಾಜಸ್ಥಾನ ಮೂಲದ ಪೀಠೋಪಕರಣ ವ್ಯಾಪಾರಿ ತೇಜ್‌ರಾಜ್ ಶರ್ಮಾ ನೀಡಿರುವ ತಪ್ಪೊಪ್ಪಿಗೆ ಹೇಳಿಕೆ.

ಬೆಂಗಳೂರು: ‘ನಾನು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಾಕ್ಷಿ ಸಮೇತ ದೂರು ದಾಖಲಿಸಿದರೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಲಿಲ್ಲ. ಈ ಬೆಳವಣಿಗೆಯಿಂದ ಬೇಸರಗೊಂಡು ಲೋಕಾಯುಕ್ತರಿಗೆ ಚಾಕುವಿನಿಂದ ಇರಿದೆ..!’ ಇದು ಲೋಕಾಯುಕ್ತರ ಮೇಲೆ ಚಾಕುವಿನಿಂದ ದಾಳಿ ನಡೆಸಿರುವ ರಾಜಸ್ಥಾನ ಮೂಲದ ಪೀಠೋಪಕರಣ ವ್ಯಾಪಾರಿ ತೇಜ್‌ರಾಜ್ ಶರ್ಮಾ ನೀಡಿರುವ ತಪ್ಪೊಪ್ಪಿಗೆ ಹೇಳಿಕೆ. ಭ್ರಷ್ಟ ವ್ಯವಸ್ಥೆ ವಿರುದ್ಧ ಜಿಗುಪ್ಸೆ ಮೂಡಿತು.

ನ್ಯಾಯಕ್ಕಾಗಿ ಲೋಕಾಯುಕ್ತರಿಗೆ ದೂರು ನೀಡಿದೆ. ಆದರೆ ಸಾಕ್ಷ್ಯ ನೀಡಿದರೂ ಅವರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಹಲವು ಬಾರಿ ಲೋಕಾಯುಕ್ತ ಸಂಸ್ಥೆಗೆ ಭೇಟಿ ನೀಡಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ವಿಚಾರಣೆ ವೇಳೆ ಆರೋಪಿ ಹೇಳಿರುವುದಾಗಿ ವಿಧಾನಸೌಧ ಠಾಣೆ ಪೊಲೀಸರು ತಿಳಿಸಿದ್ದಾರೆ.

ತುಮಕೂರಿನ ಮನೆಯಿಂದ ಹೊರಡುವಾಗಲೇ ಬ್ಯಾಗ್‌ನಲ್ಲಿ ಚಾಕು ಇಟ್ಟುಕೊಂಡು ಬಂದಿದ್ದಾಗಿ ಆರೋಪಿ ಹೇಳಿದ್ದಾನೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ