
ಬೆಂಗಳೂರು (ಮಾ. 07): ತೇಜ್ ರಾಜ್ ಶರ್ಮಾ ಎಂಬಾತನಿಂದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಯವರ ಮಗ ಇಂತಹ ಪರಿಸ್ಥಿತಿಯಲ್ಲೂ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ರಾಮಯ್ಯ ಆಸ್ಪತ್ರೆಯಲ್ಲಿ ಹಾರ್ಟ್ ಸರ್ಜನ್ ಆಗಿ ವೃತ್ತಿ ನಿರ್ವಹಿಸುತ್ತಿರುವ ವಿಶ್ವನಾಥ್ ಶೆಟ್ಟಿಯವರ ಮಗ ರವಿಶಂಕರ್ ಶೆಟ್ಟಿ ತಂದೆಯ ಆಘಾತದ ನಡುವೆಯೂ ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ರಾಮಯ್ತ ಆಸ್ಪತ್ರೆಗೆ ದಾಖಲಾಗಿರುವ ಯುವತಿಯೊಬ್ಬಳ ಹಾರ್ಟ್ ಸರ್ಜರಿ ಮಾಡಿದ್ದಾರೆ. ಯುವತಿ ಆರೋಗ್ಯವಾಗಿದ್ದಾರೆ.
ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಮೇಲೆ ಕರ್ತವ್ಯದಲ್ಲಿದ್ದಾಗ ಅವರ ಕಚೇರಿಯಲ್ಲೇ ತೇಜ್ ರಾಜ್ ಶರ್ಮಾ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಭದ್ರತಾ ವೈಫಲ್ಯವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಗಣ್ಯರು ಆಸ್ಪತ್ರೆಗೆ ದೌಡಾಯಿಸಿ ಆರೋಗ್ಯ ವಿಚಾರಿಸಿದ್ದಾರೆ.
ನ್ಯಾ.ವಿಶ್ವನಾಥ್ ಶೆಟ್ಟಿ ಅವರ ಪುತ್ರ ಡಾ.ರವಿಶಂಕರ್ ಹಾರ್ಟ್ ಸರ್ಜನ್. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ರವಿಶಂಕರ್ ಅವರಿಗೆ ತಂದೆ ಮೇಲೆ ಹಲ್ಲೆಯಾಗಿರುವ ವಿಚಾರ ತಿಳಿದಾಗ ಅವರು ಆಪರೇಷನ್ ಥಿಯೇಟರ್‌ನಲ್ಲಿದ್ದರು. ಯುವತಿಗೆ ಹಾರ್ಟ್ ಆಪರೇಷನ್ ಮಾಡುತ್ತಿದ್ದರು. ಆ ಸಮಯದಲ್ಲಿ ಡಾ.ರವಿಶಂಕರ್ ಒಂಚೂರು ಒತ್ತಡಕ್ಕೆ ಒಳಗಾಗದೇ ತಮ್ಮ ಕರ್ತವ್ಯವನ್ನ ಸಂಪೂರ್ಣಗೊಳಿಸಿ ಹೊರ ಬಂದರು. ಈ ಮೂಲಕ ಕರ್ತವ್ಯ ಪ್ರಜ್ಞೆ ಮೆರೆಯುವುದರ ಜೊತೆಗೆ ಯುವತಿಯ ಜೀವ ಉಳಿಸುವಲ್ಲೂ ಪ್ರಮುಖ ಪಾತ್ರವಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.