
ಬೆಂಗಳೂರು: ಜೆಡಿಎಸ್ ಕಾಂಗ್ರೆಸ್ ಮೈತ್ರಿ ಯಾಗಿ ಲೋಕಸಭಾ ಚುನಾವಣೆ ಎದುರಿಸಿದ್ದೇ ಆದಲ್ಲಿ ಹಾಸನ ಕ್ಷೇತ್ರವನ್ನು ಜೆಡಿಎಸ್ ಕೇಳಿದರೆ ಮಂಡ್ಯವನ್ನು ಕಾಂಗ್ರೆ ಸ್‌ಗೆ ಬಿಟ್ಟುಕೊಡು ವಂತೆ ಷರತ್ತು ವಿಧಿಸಲು ಕಾಂಗ್ರೆಸ್ ನಾಯಕತ್ವವನ್ನು ಆಗ್ರಹಿಸಲು ಪಕ್ಷದ ಮಾಜಿ ಶಾಸಕರು ಗುಂಪು ತೀರ್ಮಾನಿಸಿದೆ.
ಅಲ್ಲದೇ ಕ್ಷೇತ್ರದ ಟಿಕೆಟ್ ಅನ್ನು ಅಂಬರೀಶ್ ಅವರ ಪುತ್ರ ಅಭಿಷೇಕ್ ಗೆ ನೀಡಿ ಕಣಕ್ಕೆ ಇಳಿಸೋಣ ಎಂದಿದ್ದಾರೆ.
ನಗರದಲ್ಲಿ ಮಾಜಿ ಸಚಿವ ಎ. ಮಂಜು ನಿವಾಸದಲ್ಲಿ ಸೋಮವಾರ ಸಭೆ ನಡೆಸಿದ ಕಾಂಗ್ರೆಸ್‌ನ ಮಾಜಿ ಶಾಸಕರು ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವವನ್ನು ಉಳಿಸಿಕೊಳ್ಳಲು ಇಂತಹ ತೀರ್ಮಾನ ಕೈಗೊಳ್ಳಬೇಕು ಎಂದು ಪಕ್ಷದ ನಾಯಕತ್ವನ್ನು ಒತ್ತಾಯಿಸಲು ತೀರ್ಮಾನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.