ರಾಹುಕಾಲದಲ್ಲಿ ಲೋಕಸಭಾ ಚುನಾವಣೆ 2019 ಘೋಷಣೆ

Published : Mar 11, 2019, 08:23 AM ISTUpdated : Mar 11, 2019, 10:58 AM IST
ರಾಹುಕಾಲದಲ್ಲಿ ಲೋಕಸಭಾ ಚುನಾವಣೆ 2019 ಘೋಷಣೆ

ಸಾರಾಂಶ

ಈಗಾಗಲೇ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಚುನಾವಣಾ ಆಯೋಗವು ರಾಹುಕಾಲದಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಆಕ್ಷೇಪಕ್ಕೆ ಕಾರಣವಾಗಿದೆ. 

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ರಾಹುಕಾಲದಲ್ಲಿ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿರುವುದು ರಾಜಕೀಯ ವಲಯದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ. ಅದರಲ್ಲೂ ದಕ್ಷಿಣ ಭಾರತದ ರಾಜಕಾರಣಿಗಳು ಇದಕ್ಕೆ ಹೆಚ್ಚಿನ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಭಾನುವಾರ ಸಂಜೆ 4.30ರಿಂದ 6 ಗಂಟೆಯವರೆಗೆ ರಾಹುಕಾಲವಿತ್ತು. ಈ ಅವಧಿಯಲ್ಲೇ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿತು. ಯಾವುದೇ ಕೆಲಸವನ್ನು ರಾಹುಕಾಲದಲ್ಲಿ ಆರಂಭಿಸಬಾರದು ಎಂದು ಶಾಸ್ತ್ರಗಳು ಹೇಳುವುದರಿಂದ ರಾಹುಕಾಲವನ್ನು ತಪ್ಪಿಸಿ ಬೇರೆ ಅವಧಿಯಲ್ಲಿ ಪತ್ರಿಕಾಗೋಷ್ಠಿ ನಡೆಸಬಹುದಿತ್ತು ಎಂಬ ಮಾತುಗಳು ಕೇಳಿಬಂದವು.

ಈ ಪತ್ರಿಕಾಗೋಷ್ಠಿಗೂ ಮುಂಚೆಯೇ ದಕ್ಷಿಣದ ಕೆಲ ರಾಜಕೀಯ ಪಕ್ಷಗಳು ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯ ಸಮಯವನ್ನು ಬದಲಿಸಬೇಕೆಂದು ಆಗ್ರಹಿಸಿದ್ದವು. ಅದಕ್ಕೆ ಚುನಾವಣಾ ಆಯೋಗ ಸೊಪ್ಪು ಹಾಕಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ