ಮೊದಲು ನಿಮ್ಮ ಪಕ್ಷಕ್ಕೆ ಅಧ್ಯಕ್ಷರನ್ನು ಹುಡುಕಿ: ದಿಗ್ಗಿಗೆ ಅಮಿತ್‌ ಶಾ ಟಾಂಗ್‌

Published : Aug 03, 2019, 08:14 AM IST
ಮೊದಲು ನಿಮ್ಮ ಪಕ್ಷಕ್ಕೆ ಅಧ್ಯಕ್ಷರನ್ನು ಹುಡುಕಿ: ದಿಗ್ಗಿಗೆ ಅಮಿತ್‌ ಶಾ ಟಾಂಗ್‌

ಸಾರಾಂಶ

ಮೊದಲು ನಿಮ್ಮ ಪಕ್ಷಕ್ಕೆ ಅಧ್ಯಕ್ಷರನ್ನು ಹುಡುಕಿ: ದಿಗ್ಗಿಗೆ ಅಮಿತ್‌ ಶಾ ಟಾಂಗ್‌| ರಾಜ್ಯಸಭೆಯಲ್ಲಿ ಮಾತಿನ ಜಟಾಪಟಿ

ನವದೆಹಲಿ[ಆ.03]: ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಅಧ್ಯಕ್ಷರ ಆಯ್ಕೆ ಸಂಬಂಧ ಗೃಹ ಸಚಿವ ಅಮಿತ್‌ ಶಾ ಹಾಗೂ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ನಡುವೆ ಶುಕ್ರವಾರ ರಾಜ್ಯಸಭೆಯಲ್ಲಿ ಮಾತಿನ ಜಟಾಪಟಿ ನಡೆಯಿತು.

ಮಸೂದೆಯೊಂದರ ಮೇಲಿನ ಚರ್ಚೆ ವೇಳೆ, ‘ನೀವು ವಲ್ಲಭ ಭಾಯ್‌ ಪಟೇಲ್‌ ಅವರು ಅಲಂಕರಿಸಿದ ಸ್ಥಾನದಲ್ಲಿದ್ದೀರಿ, ನೀವು ರಾಜಕೀಯ ಪ್ರೇರಿತವಾಗಿ ಮಾತನಾಡಬಾರದು. ನೀವು ನಿಮ್ಮ ಪಕ್ಷದ ಅಧ್ಯಕ್ಷ ಸ್ದಾನವನ್ನು ತ್ಯಜಿಸಿ ಜೆ.ಪಿ. ನಡ್ಡಾಗೆ ಪಟ್ಟಾಭಿಷೇಕ ಮಾಡಿ’ ಎಂದು ದಿಗ್ವಿಜಯ್‌ ಸಿಂಗ್‌ ಅವರು ಅಮಿತ್‌ ಶಾಗೆ ಮಾತಿನಲ್ಲಿ ಚುಚ್ಚಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್‌ ಶಾ ಮೊದಲು ‘ನಿಮ್ಮ ಪಕ್ಷಕ್ಕೆ ಅಧ್ಯಕ್ಷರನ್ನು ಹುಡುಕಿ’ ಎಂದು ತಿರುಗೇಟು ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ