
ಪಟನಾ(13) : ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಅವರು ಐಶ್ವರ್ಯಾ ರೈ ಎಂಬುವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆದರೆ, ವಿವಾಹಕ್ಕೆ ಬಂದಿದ್ದ ಕೆಲ ಗುಂಪು ಆಹಾರ ಪದಾರ್ಥಗಳು ಮತ್ತು ಪಾತ್ರೆ ಹಾಗೂ ಪಗಾಡೆಗಳನ್ನು ಲೂಟಿಗೈದು ಪರಾರಿಯಾಗಿದ್ದಾರೆ.
ತೇಜ್ ಪ್ರತಾಪ್ ಮತ್ತು ಐಶ್ವರ್ಯಾ ಹೂಮಾಲೆಯನ್ನು ಬದಲಾಯಿಸಿಕೊಂಡರು. ಇದಾದ ಬೆನ್ನಲ್ಲೇ ಆರ್‌ಜೆಡಿ ಕಾರ್ಯಕರ್ತರು ಆಹಾರ ಪದಾರ್ಥಗಳು ಇತರೆ ಪದಾರ್ಥಗಳನ್ನು ಲಪಟಾಯಿಸಿದ್ದಾರೆ. ಈ ವೇಳೆ ಪತ್ರಕರ್ತರ ಕ್ಯಾಮೆರಾ ಸೇರಿ ಇತರ ಸಲಕರಣೆಗಳು ಹಾನಿಯಾಗಿ
ಈ ವಿವಾಹ ಕಾರ್ಯಕ್ರಮದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು. ಅಲ್ಲದೇ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದು, ವಿವಾಹ ಸಮಾರಂಭ ನಡೆಯುತ್ತಿದ್ದಂತೆ ಇತ್ತ ಆಹಾರ, ವಿವಿಧ ಸಾಮಾಗ್ರಿಗಳ ಲೂಟಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.