
ನವದೆಹಲಿ(ಅ.08): ಡೀಸೆಲ್ ಬೆಲೆ ಇಳಿಕೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಸೋಮವಾರ (ಅ.9-10)ದಿಂದ ಎರಡು ದಿನ ಮುಷ್ಕರ ನಡೆಸಲಿದ್ದಾರೆ. ದೇಶಾದ್ಯಂತ ಒಂದೇ ದರದ ಡೀಸೆಲ್ ಸಿಗುವಂತಾಗಲು, ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಸೇರಿದಂತೆ, ಇತರ ಕೆಲವು ವಿಷಯಗಳಿಗೂ ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ.
ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ (ಎಐಎಂಟಿಸಿ), ಅಖಿಲ ಭಾರತ ಸಾಗಾಟಗಾರರ ಅಭಿವೃದ್ಧಿ ಸಂಸ್ಥೆ ಮತ್ತು ಸರಕು ವಾಹನ ಮಾಲೀಕರ ಸಂಘಗಳ ಅಖಿಲ ಭಾರತ ಒಕ್ಕೂಟ ಪತ್ರಿಕಾಗೋಷ್ಠಿ ನಡೆಸಿ, ಪ್ರತಿಭಟನೆಯ ಕುರಿತು ಘೋಷಿಸಿವೆ.
ದೇಶಾದ್ಯಂತ ಸೋಮವಾರ ಬೆಳಗ್ಗೆ 8 ಗಂಟೆಗೆ ಮತ್ತು ಮಂಗಳವಾರ ರಾತ್ರಿ 8 ಗಂಟೆಗೆ ‘ರಸ್ತೆ ತಡೆ’ ನಡೆಸಿ ಪ್ರತಿಭಟಿಸಲು ಸಂಘಟನೆಗಳು ನಿರ್ಧರಿಸಿವೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಧನಾತ್ಮಕವಾಗಿ ಪ್ರತಿಕ್ರಿಯಿಸದಿದ್ದಲ್ಲಿ, ದೀಪಾವಳಿ ನಂತರ ಅನಿರ್ಧಿಷ್ಠಾವಧಿ ‘ರಸ್ತೆ ತಡೆ’ ನಡೆಸಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.