
ಕಾನ್ಪುರ[ಫೆ.20] ಕಾನ್ಪುರ- ಭಿವಾನಿ ಕಾಲಿಂದಿ ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದಲ್ಲಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ.
ಬುಧವಾರ ಸಂಜೆ 7.10ರ ಸುಮಾರಿಗೆ ಉತ್ತರ ಪ್ರದೇಶದ ಕಾನ್ಪುರ ಸಮೀಪ ರೈಲಿನ ಸಾಮಾನ್ಯ ಕೋಚ್ ನ ಶೌಚಾಲಯಲ್ಲಿ ಸ್ಫೋಟವಾಗಿದೆ. ಮುಂಜಾಗೃತಾ ಕ್ರಮವಾಗಿ ರೈಲು ನಿಲ್ದಾಣ ಮತ್ತು ರೈಲನ್ನು ಭದ್ರತಾ ಪಡೆಗಳು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರ ಮೇಲೆ ದಾಳಿಯಾದ ನಂತರದ ಕೆಲ ದಿನಗಳಲ್ಲಿಯೇ ಇಂಥ ಘಟನೆ ನಡೆದಿರುವುದು ಆತಂಕ ಮೂಡಿಸಿದೆ. ಕೆಲ ಕಾಲ ರೈಲನ್ನು ಪರಿಶೀಲನೆ ನಡೆಸಿ ಮುಂದಕ್ಕೆ ಕಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.