
ಬೆಂಗಳೂರು: ಖಗ್ರಾಸ ಚಂದ್ರಗ್ರಹಣ ಪ್ರಯುಕ್ತ ಶುಕ್ರವಾರದಂದು ರಾಜ್ಯದ ಹಲವು ದೇವಸ್ಥಾನಗಳಲ್ಲಿ ಪೂಜೆ, ದರ್ಶನ ಸಮಯದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಮಂತ್ರಾಲಯ, ಶೃಂಗೇರಿ ಸೇರಿದಂತೆ ಹಲವು ದೇವಸ್ಥಾನಗಳಲ್ಲಿ ಗ್ರಹಣ ಸ್ಪರ್ಶ ಕಾಲವಾದ ರಾತ್ರಿ 11.54 ರಿಂದಲೇ ವಿಶೇಷ ಪೂಜೆ- ಪುನಸ್ಕಾರಗಳು ನಡೆಯಲಿದ್ದು, ಭಕ್ತಾದಿಗಳಿಗೂ ದರ್ಶನಕ್ಕೂ ಅವಕಾಶ ಕಲ್ಪಿಸಲಾಗಿದೆ. ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಶುಕ್ರವಾರ ರಾತ್ರಿ 9 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗುವುದು.
ಮತ್ತೆ ರಾತ್ರಿ 11.30ಕ್ಕೆ ಬಾಗಿಲು ತೆರೆದು ಜಪ, ಮಂತ್ರ ಪಠಣ ಇತ್ಯಾದಿ ವಿಶೇಷ ಪೂಜಾದಿಗಳನ್ನು ನಡೆಸಲಾಗುವುದು. ರಾತ್ರಿ ಪ್ರಸಾದ ಭೋಜನದ ವ್ಯವಸ್ಥೆ ಇರುವುದಿಲ್ಲ ಎಂದು ದೇವಾಲಯ ಮೂಲಗಳು ತಿಳಿಸಿವೆ. ಮೈಸೂರು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 5.30ಕ್ಕೆ ಬಾಗಿಲು ತೆರೆಯಲಿದ್ದು, ರಾತ್ರಿ ೯.೩೦ಕ್ಕೆ ಮೊದಲೇ ಬಾಗಿಲು ಮುಚ್ಚಲಾಗುವುದು.
ದಕ್ಷಿಣ ಕನ್ನಡದ ಕುಕ್ಕೆಸುಬ್ರಹ್ಮಣ್ಯದಲ್ಲಿ ದೇವರಿಗೆ ರಾತ್ರಿಯ ಮಹಾಪೂಜೆ ಸಂಜೆ 6.30ಕ್ಕೆ ನಡೆಯಲಿದೆ. ರಾತ್ರಿ 7ರ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಸಂಜೆ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ ಭಕ್ತರಿಗೆ ಭೋಜನ ಪ್ರಸಾದದ ವ್ಯವಸ್ಥೆ ಇರುವುದಿಲ್ಲ. ಕಟೀಲು ದೇವಸ್ಧಾನದಲ್ಲಿ ರಾತ್ರಿ ಪೂಜೆ ಸಂಜೆ 6.30ಕ್ಕೆ ನಡೆಯಲಿದೆ. ರಾತ್ರಿ ಅನ್ನ ಪ್ರಸಾದ ವಿರುವುದಿಲ್ಲ.
ಗ್ರಹಣ ಸ್ಪರ್ಶ ಕಾಲದಿಂದ ಗ್ರಹಣದ ಮಧ್ಯ ಕಾಲದವರೆಗೆ (ರಾತ್ರಿ 11.54ರಿಂದ ಮಧ್ಯರಾತ್ರಿ 1.52ರ ವರೆಗೆ) ದೇವಿಗೆ ನಿರಂತರ ವಿಶೇಷ ಅಭಿಷೇಕ, ಪೂಜೆ ನಡೆಯಲಿದೆ. ಉಡುಪಿ ಜಿಲ್ಲೆಯ ಕೊಲ್ಲೂರು ದೇವಸ್ಥಾನ ಗ್ರಹಣದ ಮಧ್ಯಾವಧಿಯಲ್ಲಿ ದೇವಿಗೆ ವಿಶೇಷ ಅಭಿಷೇಕ ನೆರವೇರಲಿದೆ. ರಾತ್ರಿ ಭಕ್ತರಿಗೆ ಭೋಜನದ ವ್ಯವಸ್ಥೆ ಇರುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.