
ಬೆಂಗಳೂರು: ಖಗ್ರಾಸ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ, ದರ್ಶನಗಳ ಸಮಯಗಳಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಲಾಗಿದೆ ಎಂದು ದೇವಸ್ಥಾನಗಳ ಆಡಳಿತ ಮಂಡಳಿಗಳು ತಿಳಿಸಿವೆ. ಮಂತ್ರಾಲಯದಲ್ಲಿ ಗ್ರಹಣದ 7, 8 ಗಂಟೆಗಳ ಮುಂಚೆ ಮಠದ ಪೂಜೆ ಸ್ಥಗಿತಗೊಳ್ಳಲಿದ್ದು, ಗ್ರಹಣ ದೋಷ ರಾಶಿಗಳ ಹೋಮ ಹವನ ನೆರವೇರಿಸಲಾಗುವುದು.
ಕುಕ್ಕೆಸುಬ್ರಹ್ಮಣ್ಯ ದಲ್ಲಿ ರಾತ್ರಿ 7 ರ ಬಳಿಕ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಸಂಜೆ ಆಶ್ಲೇಷ ಬಲಿ ನೆರವೇರುವುದಿಲ್ಲ. ರಾತ್ರಿ ಭಕ್ತರಿಗೆ ಭೋಜನ ಪ್ರಸಾದದ ವ್ಯವಸ್ಥೆ ಇರುವುದಿಲ್ಲ. ಕೊಲ್ಲೂರು ದೇವಸ್ಥಾನದಲ್ಲಿ ರಾತ್ರಿ ಭಕ್ತರಿಗೆ ಊಟ ಇಲ್ಲ. ಉಡುಪಿ ಶ್ರೀಕೃಷ್ಣಮಠದಲ್ಲಿ ಸಂಜೆ 6 ರೊಳಗೆ ಪೂಜೆ ಮುಕ್ತಾಯವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.