
ಬೆಂಗಳೂರು [ಜು.14] : ಅತೃಪ್ತ ಶಾಸಕರ ಮನವೊಲಿಸುವಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರಲ್ಲಿ ಮೂಡಿರುವ ಸ್ಪಷ್ಟವಿಶ್ವಾಸದ ಬೆನ್ನಲ್ಲೇ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್ ಮತ್ತು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಕೂಡ ಅತೃಪ್ತರ ಮನವೊಲಿಸುವ ಕಾರ್ಯಾಚರಣೆಗೆ ಇಳಿಯಲು ರಾಜ್ಯಕ್ಕೆ ಸೋಮವಾರ ಆಗಮಿಸಲಿದ್ದಾರೆ.
ಸೋಮವಾರ ಕಮಲ್‌ನಾಥ್ ಮತ್ತು ಗುಲಾಮ್ ನಬಿ ಆಜಾದ್ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅತೃಪ್ತರನ್ನು ಮನವೊಲಿಸರು ಕಳೆದ ಒಂದು ವಾರದಿಂದ ನಗರದಲ್ಲಿ ಬೀಡು ಬಿಟ್ಟಿದ್ದ ಗುಲಾಂ ನಬಿ ಆಜಾದ್ ಗುರುವಾರ ರಾತ್ರಿ ದೆಹಲಿಗೆ ತೆರಳಿದ್ದರು.
ಇದೀಗ ಕುಮಾರಸ್ವಾಮಿ ಅವರ ವಿಶ್ವಾಸಮತ ಘೋಷಣೆ ಮತ್ತು ಒಬ್ಬ ಅತೃಪ್ತ ಶಾಸಕನ ಮನವೊಲಿಕೆ ಬಳಿಕ ಇತರೆ ಅತೃಪ್ತರ ಮನವೊಲಿಕೆಯ ಸ್ಪಷ್ಟವಿಶ್ವಾಸ ದೊರೆತ ಹಿನ್ನೆಲೆಯಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿ ನಿರ್ವಹಿಸಲು ಈ ಇಬ್ಬರೂ ನಾಯಕರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.