ಕಾಂಗ್ರೆಸ್ ಸರ್ಕಾರಕ್ಕೆ ನಡುಕ : ಹೈ ಅಲರ್ಟ್

Published : Jul 11, 2019, 08:56 AM IST
ಕಾಂಗ್ರೆಸ್ ಸರ್ಕಾರಕ್ಕೆ ನಡುಕ : ಹೈ ಅಲರ್ಟ್

ಸಾರಾಂಶ

ಕರ್ನಾಟಕದಲ್ಲಿ ರಾಜಕೀಯ ಹೈ ಡ್ರಾಮಾ ಬೆನ್ನಲ್ಲೇ ಇಲ್ಲೊಂದು ಕೈ ನೇತೃತ್ವದ ಸರ್ಕಾರಕ್ಕೂ ನಡುವ ಶುರುವಾಗಿದ್ದು, ನಾಯಕರು ಆತಂಕದಲ್ಲಿದ್ದಾರೆ.

ಭೋಪಾಲ್‌ [ಜು.11]: ಕರ್ನಾಟಕ ಮತ್ತು ಗೋವಾ ಸರ್ಕಾರದಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಗಳು ನೆರೆಯ ಮಧ್ಯಪ್ರದೇಶ ಕಾಂಗ್ರೆಸ್‌ ಸರ್ಕಾರಕ್ಕೆ ಮತ್ತಷ್ಟು ನಡುಕ ಹುಟ್ಟುಹಾಕಿದೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅಧಿಕಾರ ಕೈತಪ್ಪಬಾರದು ಎನ್ನುವ ಕಾರಣಕ್ಕಾಗಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರು ಕಾಂಗ್ರೆಸ್‌ ಶಾಸಕರು ಸೇರಿದಂತೆ, ಸರ್ಕಾರಕ್ಕೆ ಬೆಂಬಲ ನೀಡಿರುವ ಮೈತ್ರಿ ಪಕ್ಷಗಳ ಶಾಸಕರ ಜೊತೆಗೂ ನಿರಂತರ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶ ವಿಧಾನಸಭೆಯ ಮುಂಗಾರು ಅಧಿವೇಶನ ಬುಧವಾರ ಆರಂಭವಾಗಿದೆ. ಶೀಘ್ರವೇ ಹಣಕಾಸು ಮಸೂದೆಗೆ ಅನುಮೋದನೆ ಪಡೆದುಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಒಂದು ವೇಳೆ ಹಣಕಾಸು ಮಸೂದೆಯ ವೇಳೆ ಶಾಸಕರ ಕೊರತೆ ಬಿದ್ದರೆ, ವಿಪಕ್ಷಗಳು ಮಸೂದೆಯನ್ನು ಮತಕ್ಕೆ ಹಾಕಲು ಕೋರುವ ಸಾಧ್ಯತೆ ಇದೆ. ಒಂದು ವೇಳೆ ಹಾಗೇನಾದರೂ ಆಗಿ ಹಣಕಾಸು ಮಸೂದೆಗೆ ಸೋಲಾದರೆ ಸಿಎಂ ರಾಜೀನಾಮೆ ನೀಡುವುದು ಅನಿವಾರ್ಯವಾಗುತ್ತದೆ. ಹೀಗಾಗಿ ಹಣಕಾಸು ಮಸೂದೆ ಸೇರಿದಂತೆ ಪ್ರಮುಖ ಮಸೂದೆಗಳು ಅಂಗೀಕಾರವಾಗುವವರೆಗೂ ರಾಜಧಾನಿ ಬಿಟ್ಟು ತೆರಳಬೇಡಿ ಎಂದು ಆಡಳಿತಾರೂಢ ಕಾಂಗ್ರೆಸ್‌ ಮತ್ತು ಸರ್ಕಾರಕ್ಕೆ ಬೆಂಬಲ ನೀಡಿರುವ ಬಿಎಸ್‌ಪಿ, ಕಾಂಗ್ರೆಸ್‌ ಮತ್ತು ಪಕ್ಷೇತರ ಸದಸ್ಯರಿಗೆ ಕಮಲ್‌ನಾಥ್‌ ಸೂಚಿಸಿದ್ದಾರೆ.

230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸದಸ್ಯರ ಬೆಂಬಲ ಅಗತ್ಯವಿದೆ. 114 ಸ್ಥಾನ ಗಳಿಸಿರುವ ಕಾಂಗ್ರೆಸ್‌ ಬಿಎಸ್‌ಪಿಯ ಇಬ್ಬರು, ಸಮಾಜವಾದಿ ಪಕ್ಷದ ಒಬ್ಬ ಹಾಗೂ ನಾಲ್ವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. 109 ಸ್ಥಾನಗಳಿಸಿರುವ ಬಿಜೆಪಿ ವಿಪಕ್ಷ ಸ್ಥಾನದಲ್ಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಕಿಕ್ ಮಾಡಿದ ಚೆಂಡಿಗಾಗಿ ಕಿತ್ತಾಡಿದ ಅಭಿಮಾನಿಗಳು: ವೀಡಿಯೋ ಭಾರಿ ವೈರಲ್
ಕರ್ನಾಟಕಕ್ಕೆ ಮಹಾತ್ಮ ಗಾಂಧಿ ನರೇಗಾ ಯೋಜನೆ 5 ಕೋಟಿ ಮಾನವ ದಿನ ಕಡಿತ; ಪ್ರಿಯಾಂಕ್ ಖರ್ಗೆ ಆರೋಪ