
ಭೋಪಾಲ್ ಜೂನ್ 20: ಕಾಂಗ್ರೆಸ್ ಹಿರಿಯ ನಾಯಕ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೀಡಿದ್ದ ಹೇಳಿಕೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಮಾರಕವಾಗಿ ಪರಿಗಣಿಸುವ ಎಲ್ಲ ಲಕ್ಷಣಗಳು ಗೋಚರವಾಗುತ್ತಿದೆ. ಆರ್ಎಸ್ಎಸ್ ಮತ್ತು ಹಿಂದುಗಳ ಕುರಿತಾಗಿ ವಿವಾದಿತ ಹೇಳಿಕೆ ನೀಡಿದ್ದು ಚುನಾವಣೆ ಹೊಸ್ತಿಲ್ಲಿರುವ ಪಕ್ಷಕ್ಕೆ ತಿರುಗುಬಾಣವಾಗುತ್ತಿದೆ.
ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಎದುರಾಗಿದ್ದು ದಿಗ್ವಿಜಯ್ ಸಿಂಗ್ ಅವರನ್ನು ಕಾಂಗ್ರೆಸ್ ಕೋ ಆರ್ಡಿನೇಶನ್ ಸಮಿತಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷವನ್ನು ತಳ ಮಟ್ಟದಿಂದ ಸಂಘಟನೆ ಮಾಡುವ ಉದ್ದೇಶದಿಂದ ಚುನಾವಣೆ 5 ತಿಂಗಳು ಇರುವಾಗಲೆ ಏಕತಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಶನಿವಾರ ವರದಿಗಾರರೊಂದಿಗೆ ಮಾತನಾಡಿದ ದಿಗ್ವಿಜಯ್ ಸಿಂಗ್ ನಾನು ಹಿಂದೂಗಳನ್ನು ಉಗ್ರರೆಂದು ಕರೆದಿಲ್ಲ ಸಂಘದ ಸಿದ್ಧಾಂತಗಳು ಉಗ್ರವಾದಕ್ಕೆ ಪ್ರೇರಣೆ ನೀಡುವಂತಿವೆ ಎಂದು ಹೇಳಿದ್ದರು.
ಇದಕ್ಕೂ ಮುನ್ನ ಹೇಳಿಕೆ ನೀಡಿದ್ದ ದಿಗ್ವಿಜಯ್ ಸಿಂಗ್ ಅವರು, ಮಲೆಗಾಂವ್ ಸ್ಫೋಟವಾಗಲೀ, ಮೆಕ್ಕಾ ಮಸೀದಿ ಸ್ಫೋಟವಾಗಲೀ ಅಥವಾ ದರ್ಘಾ ಶರೀಫ್ ಸ್ಫೋಟವಾಗಲೀ ಯಾವುದೇ ಸ್ಫೋಟವಾದರೂ, ಅದನ್ನು ಸಂಘ ಪರಿವಾರಗಳ ಸಿದ್ಧಾಂತಗಳಿಂದ ಪ್ರೇರಿತರಾದ ಜನರು ಮಾಡಿದ್ದಾರೆ ಎಂದಿದ್ದರು. ದಿಗ್ವಿಜಯ್ ಸಿಂಗ್ ಅವರ ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.