ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಪಕ್ಕಾ?

Published : Nov 09, 2018, 01:08 PM IST
ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ಪಕ್ಕಾ?

ಸಾರಾಂಶ

ದೇಶದಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಇನ್ನೇನು ಕೆಲವೇ ದಿನಗಳಲ್ಲಿ ದೇಶದ ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದ ಹಲವು ರೀತಿಯ ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ. ಇದೀಗ ಮಧ್ಯ ಪ್ರದೇಶದಲ್ಲಿ ನಡೆದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಮತ್ತೆ ಬಿಜೆಪಿ ಜಯಗಳಿಸಲಿದೆ ಎಂದು ಹೇಳಲಾಗಿದೆ. 

ಭೋಪಾಲ್ :  ಮಧ್ಯ ಪ್ರದೇಶದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯುತ್ತಿದ್ದು ಮತ್ತೊಮ್ಮೆ ಬಿಜೆಪಿ ಅಧಿಕಾರ ಪಡೆಯುವ ಪ್ರಯತ್ನದಲ್ಲಿದೆ. ನಾಲ್ಕನೇ ಬಾರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಾಖಲೆ ನಿರ್ಮಾಣ ಮಾಡುವ ತಯಾರಿಯಲ್ಲಿದ್ದಾರೆ. 

ಇನ್ನು ಈ ಬಗ್ಗೆ ಟೖಮ್ಸ್ ನೌ ಹಾಗೂ ಸಿಎನ್ ಎಕ್ಸ್ ಸಮೀಕ್ಷೆ ನಡೆಸಿದ್ದು, ಬಿಜೆಪಿಯೇ ಮತ್ತೊಮ್ಮೆ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಪಡೆಯಲಿದೆ. ಆದರೆ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳು ಲಭ್ಯವಾಗಬಹುದು ಎಂದು ಸಮೀಕ್ಷೆಯ ಮೂಲಕ ತಿಳಿದು ಬಂದಿದೆ. 

ಒಟ್ಟು 230 ವಿಧಾನಸಭಾ ಕ್ಷೇತ್ರಗಳಲ್ಲಿ  115 ಸ್ಥಾನಗಳಲ್ಲಿ  ಬಿಜೆಪಿ ಜಯ ಸಾಧಿಸಲಿದೆ. ಕಾಂಗ್ರೆಸ್  95 ಸ್ಥಾನಗಳನ್ನು ಪಡೆಯಲಿದ್ದು, ಉಳಿದಂತೆ  ಬಹುಜನ ಸಮಾಜವಾದಿ ಪಕ್ಷವು  3 ಹಾಗೂ ಉಳಿದಂತೆ ಜಿಜಿಪಿ, ಎಸ್ ಪಿ, ತೃತೀಯ ರಂಗದ  ಪಕ್ಷಗಳು  10 ಸ್ಥಾನ ಪಡೆಯಲಿವೆ ಎಂದು ಸಮೀಕ್ಷಾ ವರದಿ ಹೇಳಿದೆ. 

ಇನ್ನು ಕಳೆದ ಬಾರಿಗೆ ಹೋಲಿಕೆ ಮಾಡಿದಲ್ಲಿ ಬಿಜೆಪಿ ಶೇ.41ರಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ, ಕಾಂಗ್ರೆಸ್ ಶೇ. 38ರಷ್ಟು ಸ್ಥಾನಗಳಲ್ಲಿ ಏರಿಕೆ ಕಾಣಲಿದೆ ಎಂದು ಹೇಳಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು
ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ