
ಭೋಪಾಲ್ : ಟ್ರಾಫಿಲ್ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೇ ತಾನು ಮುಖ್ಯಮಂತ್ರಿ ಬಾಮೈದಾ ಎಂದು ಹೇಳಿ ಪೊಲೀಸರಿಗೆ ಅವಾಜ್ ಹಾಕಿದ ವ್ಯಕ್ತಿಯನ್ನು ಮಧ್ಯ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಆತನ ತಪ್ಪನ್ನು ಪ್ರಶ್ನೆ ಮಾಡಿದ ಪೊಲೀಸರಿಗೆ ಅವಾಜ್ ಹಾಕಿದ ಆತ ತನ್ನ ವಾಹನಕ್ಕೆ ಸಂಬಂಧಿಸಿದ ದಾಖಲೆಯನ್ನು ನೀಡಲು ನಿರಾಕರಿಸಿದ್ದಾನೆ. ತಾನು ಶಿವರಾಜ್ ಸಿಂಗ್ ಚೌಹಾಣ್ ಅವರ ಬಾಮೈದಾ ಎಂದು ಹೇಳಿದ್ದಾರೆ.
ರಾಜೇಂದ್ರ ಸಿಂಗ್ ಚೌಹಾಣ್ ಎನ್ನುವ ಆತ ಟ್ರಾಫಿಕ್ ನಿಯಮವನ್ನು ಉಲ್ಲಂಘಿಸಿದ್ದಲ್ಲದೇ ಪೊಲೀಸರೊಂದಿಗೆ ವಾಗ್ವಾದ ನಡೆಸಿ, ಧೈರ್ಯ ಇದ್ದರೆ ನನ್ನನ್ನು ಬಂಧಿಸಿ ಎಂದು ಹೇಳಿದ್ದಾನೆ. ಆದರೆ ಆತನ ಯಾವುದೇ ಅವಾಜ್ ಗೂ ಬಗ್ಗದ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನನಗೆ ರಾಜ್ಯದಲ್ಲಿ ಕೊಟ್ಯಂತರ ಮಂದಿ ಸಹೋದರಿಯರು ಇದ್ದಾರೆ. ಇದರಲ್ಲಿ ಯಾವ ಬಾಮೈದಾ ಎಂದು ಪತ್ತೆ ಮಾಡಲಿ. ಪೊಲೀಸರು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.