ಮರ್ಸೆಲ್ ನಿಷೇಧ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

By Suvarna Web DeskFirst Published Oct 27, 2017, 3:34 PM IST
Highlights

ತಮಿಳು ಸೂಪರ್’ಸ್ಟಾರ್ ವಿಜಯ್ ಅಭಿನಯದ ಮೆರ್ಸಲ್ ಚಿತ್ರವನ್ನು ನಿಷೇಧಿಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

ನವದೆಹಲಿ (27): ತಮಿಳು ಸೂಪರ್’ಸ್ಟಾರ್ ವಿಜಯ್ ಅಭಿನಯದ ಮೆರ್ಸಲ್ ಚಿತ್ರವನ್ನು ನಿಷೇಧಿಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.

ಮರ್ಸೆಲ್ ಕೇವಲ ಚಿತ್ರವಷ್ಟೇ. ಅದು ನಿಜಜೀವನವಲ್ಲ. ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಜಿಎಸ್’ಟಿ ಹಾಗೂ ಡಿಜಿಟಲ್ ಇಂಡಿಯಾದ ಬಗ್ಗೆ ಈ ಚಿತ್ರದಲ್ಲಿ ನಕಾರಾತ್ಮಕವಾಗಿ ಬಿಂಬಿಸಲಾಗಿದೆ. ಹಾಗಾಗಿ ಚಿತ್ರವನ್ನು ನಿಷೇಧಿಸಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ  ನ್ಯಾ. ಎಂ.ಎಂ ಸುಂದರೇಶ್ ಮತ್ತು ನ್ಯಾ. ಎಂ ಸುಂದರ್ ನ್ಯಾಯಪೀಠವು, ಪ್ರಜಾಪ್ರಭುತ್ವದಲ್ಲಿ ಅಲ್ಪಸಂಖ್ಯಾತರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಚಿತ್ರವನ್ನು ನೋಡಬೇಕೇ, ಬೇಡವೋ ಎಂಬುದು ವೀಕ್ಷಕರಿಗೆ ಬಿಟ್ಟ ವಿಚಾರ. ಕೇಂದ್ರ ಸರ್ಕಾರ ಜಾರಿಗೆ ಜಿಎಸ್’ಟಿ ಹಾಗೂ ಡಿಜಿಟಲ್ ಇಂಡಿಯಾವನ್ನು ಮುಂದಿಟ್ಟುಕೊಂಡು ಚಿತ್ರವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.

click me!