
ಚೆನ್ನೈ(ಏ.04): ಮಕ್ಕಳ ಅಶ್ಲೀಲ ಚಿತ್ರಕ್ಕೆ ಪ್ರಚೋದನೆ ನೀಡುವ ಚೀನಾ ಮೂಲದ ವಿಡಿಯೋ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಲು ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.
ಟಿಕ್ ಟಾಕ್ ಆಪ್ ಮೂಲಕ ವಿಶೇಷ ವಿಡಿಯೋಗಳನ್ನು ಶೇರ್ ಮಾಡಬಹುದಾಗಿದ್ದು, ಭಾರತದಲ್ಲಿ ಸುಮಾರು 54 ಮಿಲಿಯನ್ ಬಳಕೆದಾರರಿದ್ದಾರೆ.
ಆದರೆ ಟಿಕ್ ಟಾಕ್ ಆಪ್ ಮೂಲಕ ಮಕ್ಕಳ ಅಶ್ಲೀಲ ಚಿತ್ರಕ್ಕೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್ ನ ಮಧುರೈ ವಿಭಾಗೀಯ ಪೀಠದಲ್ಲಿ ಹಿರಿಯ ವಕೀಲ ಮತ್ತು ಕುಮಾರ್ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡಿಸಿದ ಮದ್ರಾಸ್ ಹೈಕೋರ್ಟ್, ಟಿಕ್ ಟಾಕ್ ಆಪ್ ಮಕ್ಕಳ ಅಶ್ಲೀಲ ಚಿತ್ರಕ್ಕೆ ಪ್ರಚೋದನೆ ನೀಡುತ್ತಿದ್ದು, ಇದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.