
ನವಲಗುಂದ(ಸೆ.18): ಮಹದಾಯಿ, ಕಳಸಾ-ಬಂಡೂರಿ ಹೋರಾಟಗಾರರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಹದಾಯಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡರು, ರೈತರ ಮೇಲಿನ ಕೇಸ್ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಒಂದು ವರ್ಷವಾರೂ ಪ್ರಕರಣವನ್ನು ವಾಪಸ್ ಪಡೆದಿಲ್ಲ. ಮತ್ತೆ ಸಮನ್ಸ್ ಜಾರಿಗೊಳಿಸಿದ್ದಾರೆ. ನವಲಗುಂದ ರೈತರ ಮೇಲಿನ ಎಲ್ಲಾ ಕೇಸ್'ಗಳನ್ನು ಸರ್ಕಾರ ವಾಪಸ್ ಪಡೆದಿದೆ. ಆದರೆ ನರಗುಂದ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆದಿಲ್ಲ. ಇದರ ಹಿಂದೆ ಜನಪ್ರತಿನಿಧಿ ಕೈವಾಡ ಅಂತ ಆರೋಪ ಮಾಡಿದರು.
ಸೆಪ್ಟೆಂಬರ್ 30 ರೊಳಗೆ ಕೇಸ್ ವಾಪಸ್ ಪಡೆಯದಿದ್ದರೆ ಗದಗ ಡಿಸಿ ಕಚೇರಿ ಎದರು ಧರಣಿ ಆರಂಭಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.