ಮಹದಾಯಿ : ರೈತರಿಂದ ನರಗುಂದ ಬಂದ್‌

By Web DeskFirst Published Jul 16, 2019, 9:02 AM IST
Highlights

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನರಗುಂದದಲ್ಲಿ ನಡೆಯುತ್ತಿರುವ ರೈತರ ಹೋರಾಟ ನಾಲ್ಕನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆ ಇಂದು ನರಗುಂದ ಬಂದ್ ಗೆ ನಡೆಸಲಾಗುತ್ತಿದೆ. 

ನರಗುಂದ [ಜು.16]: ಕಳಸಾ, ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನರಗುಂದದಲ್ಲಿ ನಡೆಯುತ್ತಿರುವ ರೈತರ ಹೋರಾಟ ನಾಲ್ಕನೇ ವರ್ಷಕ್ಕೆ ಕಾಲಿಟ್ಟಸಂದರ್ಭದಲ್ಲಿ ಮಂಗಳವಾರ ಜು.16 ರಂದು ರೈತ ಸೇನಾ ಕರ್ನಾಟಕ ಹಾಗೂ ಮತ್ತಿತರ ಸಂಘಟನೆಗಳು ನರಗುಂದ ತಾಲೂಕು ಬಂದ್‌ಗೆ ಕರೆ ನೀಡಿವೆ. ಸರ್ಕಾರದ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಯಾಗುತ್ತಿಲ್ಲ. ಮೂರು ವರ್ಷಗಳ ನಿರಂತರ ಹೋರಾಟಕ್ಕೆ ಸರ್ಕಾರ ಸ್ಪಂದಿಸಿಲ್ಲ ಹಾಗೂ ನ್ಯಾಯಾಧಿಕರಣದ ತೀರ್ಪನ್ನು ಪ್ರಾಮಾಣಿಕವಾಗಿ ಜಾರಿಗೆ ತರುವಲ್ಲಿ ಸಹ ವಿಫಲವಾಗಿದೆ ಎಂದು ಆರೋಪಿಸಿ ಬಂದ್‌ಗೆ ಕರೆ ನೀಡಲಾಗಿದೆ.

ಮಂಗಳವಾರ ಮುಂಜಾನೆ 9 ಗಂಟೆಯಿಂದ ಮಧ್ಯಾಹ್ನ 4 ಗಂಟೆಯ ವರೆಗೆ ನರಗುಂದ ಬಂದ್‌ ಮಾಡಲು ನಿರ್ಧರಿಸಲಾಗಿದೆ. ಕಳಸಾ ಬಂಡೂರಿ ಹಳ್ಳದಿಂದ ಮಲಪ್ರಭಾ ಜಲಾಶಯಕ್ಕೆ 13.42 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ನ್ಯಾಯಾಧಿಕರಣ ಅನುಮತಿ ನೀಡಿ ಹಲವಾರು ತಿಂಗಳುಗಳೇ ಗತಿಸಿದ್ದರೂ ಕೇಂದ್ರ ಸರ್ಕಾರ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲು ಮುಂದಾಗುತ್ತಿಲ್ಲ. 

ಕೇಂದ್ರ ಸರ್ಕಾರದ ಈ ಧೋರಣೆ ಖಂಡಿಸಿ ಬಂದ್‌ ಕರೆ ನೀಡಲಾಗಿದೆ ಎಂದು ರೈತ ಸೇನಾದ ಕೋಶಾಧ್ಯಕ್ಷ ಎಸ್‌.ಬಿ.ಜೋಗಣ್ಣವರ ಪ್ರಕಟಣೆಯಲ್ಲಿ ಹೇಳಿದ್ದಾರೆ.

click me!