
ಮುಂಬೈ[ಅ.17]: ಮಹಾರಾಷ್ಟ್ರ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ನಟ ಸಂಜಯ್ ದತ್ ಅವರು ಇದೇ ಮೊದಲ ಬಾರಿಗೆ ಚುನಾವಣಾ ಕಣದಲ್ಲಿ ಕಾಣಿಸಿಕೊಳ್ಳುತ್ತಿರುವ ಶಿವಸೇನೆ ಸಂಸ್ಥಾಪಕ ಬಾಳಾ ಸಾಹೆಬ್ ಠಾಕ್ರೆ ಮನೆತನದ ಕುಡಿ ಆದಿತ್ಯ ಠಾಕ್ರೆ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಸಂಜಯ್ ದತ್ ಅವರು ಬಾಳಾ ಠಾಕ್ರೆ ಅವರ ವ್ಯಕ್ತಿತ್ವವನ್ನು ಸ್ಮರಿಸಿದ್ದಾರೆ.
ಅಲ್ಲದೆ, ಅವರ ಗರಡಿಯಲ್ಲಿ ಪಳಗಿರುವ ಆದಿತ್ಯ ಠಾಕ್ರೆ ಅವರು ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆದ್ದು ಬರುತ್ತಾರೆ. ಶಿವಸೇನೆಯನ್ನು ಮುನ್ನಡೆಸುವ ಯುವ ನಾಯಕರಾಗಿ ಹೊರಹೊಮ್ಮಲಿದ್ದಾರೆ ಎಂದು ಶುಭಕೋರಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.