ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ರಂಗೇರಿದ್ದು, ಬಿಜೆಪಿ ಹಾಗೂ ಶಿವಸೇನೆ ಮೈತ್ರಿಯಲ್ಲಿ ಅಸಮಾಧಾನಗಳು ಸ್ಫೋಟಗೊಂಡಿದ್ದು, ಬಿಜೆಪಿಯ ನಾಲ್ವರು ನಾಯಕರುಗಳನ್ನು ಅಮಾನತು ಮಾಡಲಾಗಿದೆ.
ಮುಂಬೈ, (ಅ.11): ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದೆ. ಮತ್ತೊಂದೆಡೆ ಬಿಜೆಪಿ ಹಾಗೂ ಶಿವಸೇನೆ ನಡುವೆ ಮೈತ್ರಿಯಲ್ಲಿ ಭಿನ್ನಾಭಿಪ್ರಾಯಗಳು ಉದ್ಭವಿಸಿದ್ದು, ಕೆಲ ನಾಯಕರು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ.
ಬಿಜೆಪಿ ವಿರುದ್ಧ ಬಂಡಾಯದ ಭಾವುಟ ಹಾರಿಸಿದ ಚರನ್ ವಾಗ್ಮರೆ, ಗೀತಾ ಜೈನ್, ಬಾಳಾಸಾಹೆಬ್ ಒಹ್ವಾಲ್, ದಿಲೀಪ್ ದೇಶ್ಮುಖ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
undefined
ಚುನಾವಣೆಗೂ ಮುನ್ನ ಸ್ವಪಕ್ಷೀಯರಿಂದಲೇ ಶಿವಸೇನೆಗೆ ಬಿಗ್ ಶಾಕ್!
ಶಿವಸೇನೆ ಸದಸ್ಯರು ನಿರೀಕ್ಷಿಸಿದ್ದ ಕ್ಷೇತ್ರದಲ್ಲಿ ಬಿಜೆಪಿಗೆ ಟಿಕೆಟ್ ನೀಡಿದ್ದು ಮತ್ತು ಬಿಜೆಪಿ ನಿರೀಕ್ಷಿಸಿದ ಕ್ಷೇತ್ರದಲ್ಲಿ ಶಿವಸೇನೆಗೆ ಟಿಕೆಟ್ ಸಿಕ್ಕಿದ್ದು ಟಿಕೆಟ್ ಆಕಾಂಕ್ಷಿಗಳಲ್ಲಿ ಭಾರೀ ನಿರಾಸೆ ಉಂಟು ಮಾಡಿದೆ. ಈ ಕಾರಣದಿಂದ ಪಕ್ಷದ ವಿರುದ್ಧ ಬಂಡಾಯ ಎದ್ದು, ಪಕ್ಷೇತರವಾಗಿ ಸ್ಪರ್ಧಿಸಲು ಮುಂದಾದ್ದ ಈ ನಾಲ್ವರು ನಾಯಕರನ್ನು ಬಿಜೆಪಿ ಉಚ್ಚಾಟಿಸಿದೆ.
ಅಷ್ಟೇ ಅಲ್ಲದೇ ಶಿವಸೇನೆಯಲ್ಲೂ ಸಹ ಅಸಮಾಧಾನ ಸ್ಫೋಟಗೊಂಡಿದೆ. ತಮ್ಮ ನಾಯಕನಿಗೆ ಟಿಕೆಟ್ ಸಿಗದ ಕಾರಣಕ್ಕೆ ಶಿವಸೇನೆಯ 26 ಕಾರ್ಪೋರೇಟರ್ ಗಳು ಮತ್ತು ನೂರಾರು ಕಾರ್ಯಕರ್ತರು ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ತನ್ನ ನಾಲ್ವರು ಬಂಡಾಯ ನಾಯಕರನ್ನು ಪಕ್ಷದಿಂದ ಅಮಾನತು ಮಾಡಿದೆ.
ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಆದಿತ್ಯ ಠಾಕ್ರೆ?
ಮಹಾರಾಷ್ಟ್ರದ ಕಲ್ಯಾಣ್ ಪೂರ್ವ ಕ್ಷೇತ್ರದಿಂದ ಶಿವಸೇನೆ ನಾಯಕ ಧನಂಜಯ್ ಬಾಡೊರೆ ಅವರಿಗೆ ಟಿಕೆಟ್ ನೀಡದೇ, ಬಿಜೆಪಿ ಅಭ್ಯರ್ಥಿಯಾಗಿ ಗಣಪತ್ ಕಲು ಗಾಯಕ್ವಾಡ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಬೇಸತ್ತು ಶಿವಸೇನೆಯ 26 ಕಾರ್ಪೋರೇಟರ್ ಗಳು ಮತ್ತು 300 ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.