
ಮುಂಬೈ[ಅ.12]: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ತನ್ನ 40 ಜನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಅದರಲ್ಲಿ ಕರ್ನಾಟಕ ಮೂಲದ ಬಿಜೆಪಿ ರಾಷ್ಟ್ರೀಯ ಮುಖಂಡ ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೂ ಸ್ಥಾನ ಪಡೆದಿದ್ದಾರೆ.
ಸವದಿ ಅವರು ಈ ಮುನ್ನ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ವೀಕ್ಷಕರಾಗಿ ಕೆಲಸ ಮಾಡಿದ್ದರು. ಈ ಆಧಾರದಲ್ಲಿ ಮಹಾರಾಷ್ಟ್ರ ಗಡಿಯ ಅಥಣಿಯವರಾದ ಸವದಿ ಅವರಿಗೆ ತಾರಾ ಪ್ರಚಾರಕ ಪಟ್ಟಕಟ್ಟಲಾಗಿದೆ.
ಉಳಿದಂತೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕಾರ್ಯಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್- ಮೊದಲಾದವರಿದ್ದಾರೆ. ಟಿಕೆಟ್ ನಿರಾಕರಿಸಲ್ಪಟ್ಟಏಕನಾಥ ಖಡ್ಸೆ ಹಾಗೂ ವಿನೋದ್ ತಾವಡೆ ಅವರಿಗೂ ತಾರಾ ಪ್ರಚಾರಕ ಪಟ್ಟನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.