ಸಲ್ಮಾನ್ ಖಾನ್ ಬಾಡಿಗಾರ್ಡ್ ಶಿವಸೇನೆಗೆ ಸೇರ್ಪಡೆ

Published : Oct 19, 2019, 01:28 PM IST
ಸಲ್ಮಾನ್ ಖಾನ್ ಬಾಡಿಗಾರ್ಡ್ ಶಿವಸೇನೆಗೆ ಸೇರ್ಪಡೆ

ಸಾರಾಂಶ

ಮಹಾರಾಷ್ಟ್ರ ವಿಧಾನಸಭಾ ಚನಾವಣೆಗೆ ಇನ್ನೆರಡೇ ದಿನ ಬಾಕಿ | ಮಹಾರಾಷ್ಟ್ರ ವಿಧಾನಸಭೆಯಲ್ಲಿ 288 ಕ್ಷೇತ್ರಗಳಿವೆ | 194 ರಲ್ಲಿ ಬಿಜೆಪಿ- ಶಿವಸೇನೆ ಮೈತ್ರಿಗೆ ಗೆಲುವಾಗಲಿದೆ ಎಂದು ಎಬಿಸಿ- ಸಿವೋಟರ್ ಸಮೀಕ್ಷೆ ಹೇಳಿದೆ. 

ಮುಂಬೈ (ಅ. 19): ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಎರಡು ದಿನ ಬಾಕಿಯಿರುವಾಗ ಬಾಲಿವುಡ್ ಸಲ್ಮಾನ್ ಖಾನ್ ಬಾಡಿಗಾರ್ಡ, ಆಪ್ತ ಸ್ನೇಹಿತ ಗುರ್ಮೀತ್ ಸಿಂಗ್ ಇಂದು ಶಿವಸೇನೆ ಸೇರಿದ್ದಾರೆ. 

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ನಿವಾಸ ಮಾತೋಶ್ರೀಯಲ್ಲಿ ಎಲ್ಲರ ಸಮ್ಮುಖದಲ್ಲಿ ಶಿವಸೇನೆ ಸೇರಿದ್ದಾರೆ. ಶಿವಸೇನೆ ಇದನ್ನು ಟ್ವಿಟರ್ ಹ್ಯಾಂಡಲ್ ನಲ್ಲಿ ಅಧಿಕೃತಗೊಳಿಸಿದೆ. 

 

ಅಕ್ಟೋಬರ್ 21 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದೆ. ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದೆ. 

ಈ ಬಾರಿಯ ಶಿವಸೇನೆ ಪ್ರಣಾಳಿಕೆ ಗಮನ ಸೆಳೆದಿದೆ. ಶೇ. 30  ರಷ್ಟು ವಿದ್ಯುತ್ ದರ ಇಳಿಕೆ, ಕಡಿಮೆ ಬೆಲೆಗೆ ರಸಗೊಬ್ಬರಗಳು, ಕೀಟನಾಶಕ, ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ, ಫಸಲ್ ಭೀಮಾ ಯೋಜನೆ ಜಾರಿ ಸೇರಿದಂತೆ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿ ಮಾಡುವುದಾಗಿ ಹೇಳಿಕೊಂಡಿದ್ದಾರೆ. 

ಮಹಾರಾಷ್ಟ್ರ ವಿಧಾನಸಭೆಯಲ್ಲಿ 288 ಕ್ಷೇತ್ರಗಳಿವೆ. ಅದರಲ್ಲಿ 194 ರಲ್ಲಿ ಬಿಜೆಪಿ- ಶಿವಸೇನೆ ಮೈತ್ರಿಗೆ ಗೆಲುವಾಗಲಿದೆ ಎಂದು ಎಬಿಸಿ- ಸಿವೋಟರ್ ಸಮೀಕ್ಷೆ ಹೇಳಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ