
ಮುಂಬೈ : ಮಹಾರಾಷ್ಟ್ರದಲ್ಲಿ ವಿದ್ಯುತ್ ವಿತರಣಾ ಕಂಪನಿ ನೀಡಿದ ವಿದ್ಯುತ್ ಬಿಲ್ ನೋಡಿ ಆಘಾತಗೊಂಡ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಲ್ಲಿನ ಭರತ್ ನಗರ ಪ್ರದೇಶದಲ್ಲಿ ತರಕಾರಿ ವ್ಯಾಪಾರಿಯಾಗಿದ್ದ ಜಗನ್ನಾಥ್ ಎಂಬ ವ್ಯಕ್ತಿಗೆ ಇಲ್ಲಿನ ವಿದ್ಯುತ್ ವಿತರಣಾ ಕಂಪನಿಯು ಬರೋಬ್ಬರಿ 8.64 ಲಕ್ಷ ವಿದ್ಯುತ್ ಬಿಲ್ ನೀಡಿದ್ದು ಇದನ್ನು ನೋಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ವಿದ್ಯುತ್ ಬಿಲ್ ಅತ್ಯಧಿಕ ಪ್ರಮಾಣದಲ್ಲಿ ಬಂದಿದ್ದು, ಇದರಿಂದಲೇ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದಾನೆ.
ಕಳೆದ 20 ವರ್ಷದಿಂದ ಸಣ್ಣ ಶೆಡ್ ನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡು ಕುಟುಂಬ ವಾಸವಾಗಿದ್ದು, 55.519 ಯೂನಿಟ್ ವಿದ್ಯುತ್ ಉರಿಸಿದ್ದೀರಿ ಎಂದು ಲಕ್ಷ ಲಕ್ಷ ವಿದ್ಯುತ್ ಬಿಲ್ ನೀಡಲಾಗಿತ್ತು.
ಇದೀಗ ಈ ಪ್ರಮಾಣದಲ್ಲಿ ಬಿಲ್ ನೀಡಿದ ಮಹಾರಾಷ್ಟ್ರ ಎಲೆಕ್ಟ್ರಿಸಿಟಿ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್ ಕ್ಲರ್ಕ್ ನನ್ನು ಕೆಸಲದಿಂದಲೇ ವಜಾ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.