
ಮುಂಬೈ : ಕಳೆದ ಚುನಾವಣೆ ವೇಳೆ ಮೈತ್ರಿಯಾಗಿ ಸರ್ಕಾರ ರಚನೆ ಮಾಡಿಕೊಂಡಿದ್ದ ಶಿವ ಸೇನಾ ಹಾಗೂ ಬಿಜೆಪಿ ಇದೀಗ ಮತ್ತೊಮ್ಮೆ ಒಂದಾಗಿ ಚುನಾವಣೆ ಎದುರಿಸುವ ಸಾಧ್ಯತೆ ಇದೆ.
ಆದರೆ ಬಿಜೆಪಿಯೊಂದಿಗೆ ಒಂದಾಗಿ ಚುನಾವಣೆ ಎದುರಿಸುವುದಾದಲ್ಲಿ ಮಹಾರಾಷ್ಟ್ರದ 288 ಕ್ಷೇತ್ರಗಳ ಪೈಕಿ 152 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ಹೊಂದಿದೆ. ಆಗ ಬಿಜೆಪಿಗೆ ಕೇವಲ136 ಕ್ಷೇತ್ರಗಳು ಉಳಿಯಲಿವೆ.
ಅಲ್ಲದೇ ಮುಖ್ಯಮಂತ್ರಿ ಸ್ಥಾನವನ್ನೂ ಕೂಡ ಶಿವ ಸೇನೆಯೇ ಬಯಸುತ್ತಿದೆ. ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲು ಅಧಿಕ ಸ್ಥಾನಗಳನ್ನು ಶಿವ ಸೇನೆಗೆ ಬಿಟ್ಟುಕೊಟ್ಟಲ್ಲಿ ಬಿಜೆಪಿ 2 ನೇ ಸ್ಥಾನದಲ್ಲಿ ಉಳಿಯಲಿದೆ.
ಇನ್ನು ಎನ್ ಡಿಎ ಮೈತ್ರಿಕೂಟದಿಂದ ಹೊರಗೆ ಬಂದು 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಸೇರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಶಿವ ಸೇನಾ ಮುಖಂಡ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಮಾಡಿದ ಮಾರನೇ ದಿನವೇ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ, ಬಿಜೆಪಿಯನ್ನು ಕಟುವಾಗಿ ಟೀಕಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.