
ಪುಣೆ: ಅಪಘಾತದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ಸಹಾಯ ಮಾಡುವ ನೆಪದಲ್ಲಿ ಮಹಿಳಾ ಪೊಲೀಸ್ ವೊಬ್ಬರು 50,000 ರು. ದೋಚಿದ ಘಟನೆ ತೆಲಂಗಾಣದ ದಭಾಡೆ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಬೆಂಗಳೂರಿನ ಎಂಬಿಎ ವಿದ್ಯಾರ್ಥಿ ಪ್ರಣಿತಾ ನಂದಕಿಶೋರ್ ಮತ್ತವರ ತಂದೆ ಮೋಟಾರ್ ಸೈಕಲ್‌ನಲ್ಲಿ ಎಟಿಎಂನಿಂದ 50,000 ಹಣ ತೆಗೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯದಲ್ಲಿ ಅಪಘಾತ ನಡೆದಿದೆ.
ಈ ವೇಳೆ ಪೊಲೀಸ್ ಪೇದೆ ಸ್ವಾತಿ ಜಾದವ್, ಸಂತ್ರಸ್ತರನ್ನು ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ, ಹಣದ ಬ್ಯಾಗ್ ಲೂಟಿ ಮಾಡಿದ್ದ ಪೇದೆ, ಬಳಿಕ ಆ ಬ್ಯಾಗ್ ವಿಚಾರವೇ ತನಗೆ ಗೊತ್ತಿಲ್ಲವೆಂಬಂತೆ ನಟಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.