
ರಾಯಚೂರು (ಆ.12): ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಪಡೆದಿರುವ ಸಾಲವನ್ನು ನಮ್ಮ ಸರ್ಕಾರ ಮನ್ನಾ ಮಾಡಿದೆ. ಇದರಿಂದ ಸುಮಾರು 22.22 ಲಕ್ಷ ರೈತರ 8,165 ಕೋಟಿ ಸಾಲ ಮನ್ನಾ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡುವಂತೆ ಪ್ರಧಾನಿ ಮೋದಿ ಮೇಲೆ ಒತ್ತಡ ಹಾಕಿ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ರಾಯಚೂರು ಸಮಾವೇಶದಲ್ಲಿಂದು ಹೇಳಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕುಗಳಿಂದ ರೈತರು ಪಡೆದಿರುವ ಸಾಲ ಮನ್ನಾ ಮಾಡುವಂತೆ ಪ್ರಧಾನಿ ಮೇಲೆ ಒತ್ತಡ ಹೇರಲು ಲೋಕಸಭೆಗೆ ಮುತ್ತಿಗೆ ಹಾಕಿ. ಸಾಲ ಮನ್ನಾ ವಿಚಾರದಲ್ಲಿ ಪ್ರಧಾನಿಯನ್ನು ಭೇಟಿಯಾದಾಗ ಯಡಿಯೂರಪ್ಪ, ಅನಂತ್ ಕುಮಾರ್ ಸ್ಥಳದಲ್ಲಿಯೇ ಇದ್ದರೂ ಬಾಯಿ ಬಿಡಲಿಲ್ಲ. ಯಡಿಯೂರಪ್ಪನವರೇ, ನೀವು ಹಸಿರು ಟವೆಲ್ ಹಾಕಿಕೊಂಡು ನಾನು ರೈತನ ಮಗ ಎಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದೀರಿ. ರೈತರ ಮೇಲೆ ಪ್ರಮಾಣ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದೀರಿ. ಆದರೆ ಮೂರೇ ತಿಂಗಳಲ್ಲಿ ಹಾವೇರಿ ಗೊಬ್ಬರ ಬೀಜ ಕೇಳಿದ ರೈತರನ್ನು ಕೊಂದು ಹಾಕಿದೀರಿ. ರೈತರು, ಬಡವರ ಬಗ್ಗೆ ಮಾತನಾಡಲು ನಿಮಗೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಯವರಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿಯವರು ಜನರನ್ನು ದಾರಿ ತಪ್ಪಿಸುವ, ಮರಳು ಮಾಡುವ ಸುಳ್ಳು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ 60 ವರ್ಷದಲ್ಲಿ ಏನೂ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಈ ದೇಶದಲ್ಲಿ ನೀರಾವರಿ ಯೋಜನೆಗಳಾಗಿದ್ದರೆ ಕೈಗಾರಿಕೆಗಳು ಸ್ಥಾಪನೆಯಾಗಿದ್ದರೆಶಿಕ್ಷಣದ ಪ್ರಮಾಣ ಶೇ.76 ಕ್ಕೆ ಹೋಗಿದ್ದರೆ, ಆಹಾರದಲ್ಲಿ ಸ್ವಾವಲಂಬನೆ ಸಾಧಿಸಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣವೇ ಹೊರತು ಬಿಜೆಪಿ ಅಲ್ಲ ಎಂದಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.