
ನವದೆಹಲಿ: ಬೆಳಗಾವಿಯ ನಾಯಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಜಗಳ ಇದೀಗ ಜಗಜ್ಜಾಹಿರಾಗಿದೆ. ಈ ಸಂಬಂಧ ಮಾತನಾಡಿರುವ ಬಿಜೆಪಿ ಮುಖಂಡ ಈಶ್ವರಪ್ಪ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಈಗಿರುವ ಅಸಮಾಧಾನಗಳ ಕಾರಣದಿಂದಲೇ ಉರುಳಲಿದೆ ಎಂದು ಹೇಳಿದ್ದಾರೆ.
ಪಿಎಲ್‌ಡಿ ಬ್ಯಾಂಕ್ ಪ್ರಕರಣದಲ್ಲಿ ಕಾಂಗ್ರೆಸ್ ನಲ್ಲಿರುವ ಗೊಂದಲಗಳು ಬಹಿರಂಗ ಗೊಂಡಿವೆ. ಇದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಮೈತ್ರಿ ಸರ್ಕಾರ ತನ್ನಷ್ಟಕ್ಕೆ ಪತನಗೊಳ್ಳಲಿದೆ ಎಂದು ಬಿಜೆಪಿ ಈಶ್ವರಪ್ಪ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಎರಡು ದಿನದಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಲಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.