
ಕೊಚ್ಚಿ : ಮಲಯಾಳಂ ಪ್ರಸಿದ್ಧ ಕಿರುತೆರೆ ನಟಿ ಕುಟುಂಬವೊಂದು ನಕಲಿ ನೋಟು ದಂಧೆಯಲ್ಲಿ ಪಾಲ್ಗೊಂಡಿರುವುದು ಬೆಳಕಿಗೆ ಬಂದಿದೆ.
ನಟಿ ನಿವಾಸದ ಮೇಲೆ ದಾಳಿ ಮಾಡಿದ್ದು, ಈ ವೇಳೆ ಒಟ್ಟು 57 ಲಕ್ಷ ರು.ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದೆ. ಈ ಸಂಬಂಧ ನಟಿ ಸೂರ್ಯ ಸಸಿಕುಮಾರ್ ಹಾಗೂ ಸಹೋದರಿ ಶೃತಿ ತಾಯಿ ರಿಮಾ ದೇವಿಯನ್ನು ಪೊಲೀಸರು ಮಂಗಳವಾರ ಬಂಧನಕ್ಕೆ ಒಳಪಡಿಸಿದ್ದಾರೆ.
ಕೊಚ್ಚಿಯ ಇಡುಕ್ಕಿ ಪೊಲೀಸರು ಮೂವರನ್ನು ಬಂಧಿಸಿದ್ದು, ನಟಿಯ ತಾಯಿಯೇ ಈ ದಂಧೆಯಲ್ಲಿ ಮುಖ್ಯ ಕಿಂಗ್ ಪಿನ್ ಎನ್ನಲಾಗಿದೆ.
ಅತ್ಯಧಿಕ ಪ್ರಮಾಣದಲ್ಲಿ ಇವರು ನಕಲಿ ನೋಟುಗಳನ್ನು ಮುದ್ರಣ ಮಾಡುತ್ತಿದ್ದರು. ಈ ದಂಧೆಯಲ್ಲಿ ಬರುತ್ತಿದ್ದ ಅರ್ಧಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಆದಾಯ ಪಡೆದುಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿ ವೇಳೆ ನಕಲಿ ನೋಟುಗಳ ಮುದ್ರಣಕ್ಕೆ ಬಳಸುತ್ತಿದ್ದ ವಿವಿಧ ರೀತಿಯ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.