ಅಡಾಲ್ಫ್ ಹಿಟ್ಲರ್‌ ರೀತಿ ಸರ್ವಾಧಿಕಾರ ಹೇರಲು ಮೋದಿ ಯತ್ನ: ಖರ್ಗೆ

Published : Nov 05, 2018, 11:53 AM IST
ಅಡಾಲ್ಫ್ ಹಿಟ್ಲರ್‌ ರೀತಿ ಸರ್ವಾಧಿಕಾರ ಹೇರಲು ಮೋದಿ ಯತ್ನ: ಖರ್ಗೆ

ಸಾರಾಂಶ

ಹಿಟ್ಲರ್‌ ರೀತಿಯಲ್ಲೇ ಭಾರತದ ಮೇಲೆ ಸರ್ವಾಧಿಕಾರ ಹೇರಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. 

ಮುಂಬೈ: ಜರ್ಮನಿ ಮೇಲೆ ಸರ್ವಾಧಿಕಾರ ಹೇರಿದ್ದ ಹಿಟ್ಲರ್‌ ರೀತಿಯಲ್ಲೇ ಭಾರತದ ಮೇಲೆ ಸರ್ವಾಧಿಕಾರ ಹೇರಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. 

ಮುಂಬೈನಲ್ಲಿ ಕಾಂಗ್ರೆಸ್‌ ಘಟಕ ಹಮ್ಮಿಕೊಂಡಿದ್ದ ‘ಸಂವಿಧಾನ ಉಳಿಸಿ ಕಾರ್ಯಕ್ರಮ’ ಉದ್ದೇಶಿಸಿ ಮಾತನಾಡಿದ ಅವರು, ‘ಬಿಜೆಪಿ ಆಡಳಿತಾವಧಿಯಲ್ಲಿ ದೇಶವು ಹಾಳಾಗುತ್ತಿದೆ. ಆದರೆ, ಸಾಂವಿಧಾನಿಕ ಸಂಸ್ಥೆಗಳನ್ನು ನಾಶ ಮಾಡಿದ ರೀತಿಯಲ್ಲಿ ಸಂವಿಧಾನವನ್ನು ನಾಶ ಮಾಡಲು ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಕಾಶ ನೀಡುವುದಿಲ್ಲ,’ ಎಂದು ಗುಡುಗಿದರು. 

ಕಳೆದ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿ ಸರ್ಕಾರಕ್ಕೆ ನಾಲ್ಕು ಹೆಜ್ಜೆ ಇಡಲು ಸಾಧ್ಯವಾಗಿಲ್ಲ. ಇಂಥ ಸಂದರ್ಭದಲ್ಲಿ ಕಳೆದ 70 ವರ್ಷಗಳಿಂದ ನಾವೇನು ಮಾಡಿದ್ದೇವೆ ಎಂದು ಕಾಂಗ್ರೆಸ್‌ ಕಡೆ ಬೊಟ್ಟು ಮಾಡುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ಮಹಾರಾಷ್ಟ್ರ ಕಾಂಗ್ರೆಸ್‌ ಉಸ್ತುವಾರಿಯೂ ಆಗಿರುವ ಖರ್ಗೆ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಆರೋಪ ಸಾಬೀತು : ಪಾಕ್‌ ಐಎಸ್‌ಐ ಮಾಜಿ ಮುಖ್ಯಸ್ಥ ಹಮೀದ್‌ಗೆ 14 ವರ್ಷ ಜೈಲು