ಜಾರಿ ಬಿದ್ದು ಮಲ್ಲಿಕಾರ್ಜುನ್ ಖರ್ಗೆಗೆ ಗಾಯ

Published : Dec 24, 2018, 08:55 AM IST
ಜಾರಿ ಬಿದ್ದು ಮಲ್ಲಿಕಾರ್ಜುನ್ ಖರ್ಗೆಗೆ ಗಾಯ

ಸಾರಾಂಶ

ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ನಾನಕ್ಕಾಗಿ ಬಾತ್‌ ರೂಮಿಗೆ ತೆರಳಿದ್ದಾಗ ಕಾಲು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಈ ವೇಳೆ ಅವರಿಗೆ ಮನೆಯಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.  

ಕಲಬುರಗಿ :  ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ನಾನಕ್ಕಾಗಿ ಬಾತ್‌ ರೂಮಿಗೆ ತೆರಳಿದ್ದಾಗ ಕಾಲು ಜಾರಿ ಬಿದ್ದು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ನಗರದ ಐವಾನ್‌ ಶಾಹಿಯಲ್ಲಿರುವ ಸ್ವಗೃಹ ‘ಲುಂಬಿನಿ’ಯಲ್ಲಿ ಖರ್ಗೆ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಈ ವೇಳೆ ತಕ್ಷಣ ಅವರು ಚೀರಿಕೊಂಡಿದ್ದು, ಸಹಾಯಕ್ಕೆ ಓಡಿಬಂದ ಗನ್‌ಮ್ಯಾನ್‌ ಮತ್ತು ಆಪ್ತ ಸಹಾಯಕರು ಎಬ್ಬಿಸಿದ್ದಾರೆ. 

ಘಟನೆಯಲ್ಲಿ ಖರ್ಗೆ ಅವರ ಸೊಂಟಕ್ಕೆ ಮತ್ತು ಬಲಗಾಲಿನ ಹೆಬ್ಬೆರಳಿಗೆ ಗಾಯಗಳಾಗಿವೆ. ವೈದ್ಯರನ್ನು ಮನೆಗೆ ಕರೆಸಿ ಪ್ರಾಥಮಿಕ ಚಿಕಿತ್ಸೆ ಕೊಡಲಾಗಿದೆ.

ಹೆಚ್ಚಿನ ಗಾಯಗಳೇನೂ ಆಗಿಲ್ಲ ಎಂದು ನಂತರ ಖರ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಗನ್‌ ಮ್ಯಾನ್‌ ಆಸರೆಯೊಂದಿಗೆ ಖರ್ಗೆ ನಡೆದಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Cockroach Janata Part: ಕಾಕ್ರೋಚ್ ಭಯ ಕಾಂಗ್ರೆಸ್‌ಗೆ ಹೊರತು ಬಿಜೆಪಿಗಲ್ಲ; ಪ್ರಲ್ಹಾದ್ ಜೋಶಿ ಕೊಟ್ಟ ಉತ್ತರ ಕೇಳಿ ಶಾಕ್!
India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!