ಗೆದ್ದರೂ ಕಾಂಗ್ರೆಸ್‌ಗೆ ತಲೆ ನೋವು: ಸಿಎಂ ಅಭ್ಯರ್ಥಿ ಆಯ್ಕೆ ಹೊಣೆ ಖರ್ಗೆ ಹೆಗಲಿಗೆ

By Web DeskFirst Published Dec 12, 2018, 11:22 AM IST
Highlights

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಹತ್ತಿರ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕುರ್ಚಿ ಪೈಪೋಟಿ ಜೋರಾಗಿದೆ. ಈ ಹಿನ್ನಲೆಯಲ್ಲಿ ಮಧ್ಯಪ್ರದೇಶ ಸಿಎಂ ಅಭ್ಯರ್ಥಿ ಆಯ್ಕೆಯನ್ನು ಕೈ ಹೈಕಮಾಂಡ್ ಕಲಬುರಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ ಹಾಕಿದೆ. 

ಬೆಂಗಳೂರು, [ಡಿ.12]  ಲೋಕಸಭೆ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿದ್ದ ಪಂಚ ರಾಜ್ಯಗಳ ರಿಸೆಲ್ಟ್ ಹೊರ ಬಿದ್ದಿದ್ದು, ಈ ಫಲಿತಾಂಶ ಎಲ್ಲರ ಊಹೆ ಉಲ್ಟಾ ಪಲ್ಟಾ ಮಾಡಿದೆ. 

ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡಿರುವ ಕಾಂಗ್ರೆಸ್ ಗೆದ್ದು ಬೀಗಿದೆ. ಆದ್ರೆ, ಇದೀಗ ಕಾಂಗ್ರೆಸ್ ಹೈಕಾಂಡ್ ಗೆ ಹೊಸ ತಲೆ ನೋವು ಶುರುವಾಗಿದೆ. 

ಪಂಚ ಫಲಿತಾಂಶ: ಯಾರ್ಯಾರಿಗೆ ಎಷ್ಟೆಷ್ಟು?..ಸಂಪೂರ್ಣ ವಿವರ

ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಹತ್ತಿರ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.

 ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಹತ್ತಿರ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಮಲ್‌ ನಾಥ್‌ ಅವರಾಗುತ್ತಾರಾ ಅಥವಾ ಜ್ಯೋತಿರಾದಿತ್ಯ ಸಿಂಧಿಯಾ ಅವರಾಗುತ್ತಾರಾ ಎಂಬುದು ಕುತೂಹಲ ಕೆರಳಿಸಿದೆ. 

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷವು ಈ ಪ್ರಕ್ರಿಯೆಯ ಉಸ್ತುವಾರಿ ನೋಡಿಕೊಳ್ಳಲು ಹಿರಿಯ ನಾಯಕರಾದ ಕಲಬುರಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಕೇಂದ್ರ ಸಚಿವ ಎ.ಕೆ. ಆ್ಯಂಟನಿ ಅವರನ್ನು ಭೋಪಾಲ್‌ಗೆ ಕಳಿಸಿಕೊಟ್ಟಿದೆ.

click me!