ಪ್ರಸಕ್ತ ಸಾಲಿನ ದೇವರಾಜ ಅರಸು ಪ್ರಶಸ್ತಿಗೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Published : Aug 18, 2017, 04:50 PM ISTUpdated : Apr 11, 2018, 01:12 PM IST
ಪ್ರಸಕ್ತ ಸಾಲಿನ ದೇವರಾಜ ಅರಸು ಪ್ರಶಸ್ತಿಗೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಸಾರಾಂಶ

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಹೆಸರಿನಲ್ಲಿ ಕರ್ನಾಟಕ ಸರ್ಕಾರ ಪ್ರತಿಷ್ಟಾಪಿಸಿರುವ ರಾಜ್ಯ ಮಟ್ಟದ ಪ್ರಸಕ್ತ  ಸಾಲಿನ ಪ್ರಶಸ್ತಿಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಎರಡು ಲಕ್ಷ ನಗದು ಹಾಗೂ ಫಲಕಗಳನ್ನು ಒಳಗೊಂಡಿದೆ.

ಬೆಂಗಳೂರು (ಆ.18): ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಹೆಸರಿನಲ್ಲಿ ಕರ್ನಾಟಕ ಸರ್ಕಾರ ಪ್ರತಿಷ್ಟಾಪಿಸಿರುವ ರಾಜ್ಯ ಮಟ್ಟದ ಪ್ರಸಕ್ತ  ಸಾಲಿನ ಪ್ರಶಸ್ತಿಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಎರಡು ಲಕ್ಷ ನಗದು ಹಾಗೂ ಫಲಕಗಳನ್ನು ಒಳಗೊಂಡಿದೆ.

ದೇವರಾಜ ಅರಸುರವರಿಗೆ ಖರ್ಗೆಯವರು ಅತ್ಯಂತ ನಿಕಟವರ್ತಿಯಾಗಿದ್ದರು. ಜೀವನದುದ್ದಕ್ಕೂ ಸಮಾಜವಾದಿ ಹಾಗೂ ಜಾತ್ಯಾತೀತ ಆಶಯಗಳನ್ನು ಅಳವಡಿಸಿಕೊಂಡು ಅದಕ್ಕೆ ಬದ್ದವಾಗಿ ನಡೆದುಕೊಂಡಿದ್ದಾರೆ.

ದೇವರಾಜ ಅರಸು ಅವರ ಸರ್ಕಾರದಲ್ಲಿ ಅಕ್ಟ್ರಾಯ್ ಪದ್ಧತಿ ನಿಷೇಧ ಸಮಿತಿ ಅಧ್ಯಕ್ಷರಾಗಿ 1973 ರಲ್ಲಿ ಖರ್ಗೆ ನೀಡಿದ ವರದಿಯ ಆಧಾರದ ಮೇಲೆ ಕರ್ನಾಟಕದಲ್ಲಿ ಜಾರಿಯಿದ್ದ ಅಕ್ಟ್ರಾಯ್ ಪದ್ಧತಿ ನಿಷೇಧಗೊಂಡಿತು. 1974 ರಲ್ಲಿ ಜಗಜೀವನ್ ರಾಮ್ ಚರ್ಮ ಕೈಗಾರೀಕೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಅದರ ಅಭಿವೃದ್ಧಿಗೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದರು. ಹೀಗೆ ಖರ್ಗೆಯವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಜನಪರವಾಗಿ, ಬಡವರ ಧ್ವನಿಯಾಗಿ ದುಡಿದವರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!