
ನವದೆಹಲಿ(ಮೇ.12): ಕೆಪಿಸಿಸಿ ಗದ್ದುಗೆ ಗುದ್ದಾಟ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಹೈಕಮಾಂಡ್ ಆಮಂತ್ರಣದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ದೆಹಲಿಗೆ ದೌಡಾಯಿಸಿದ್ದು, ರಾಜ್ಯ ಕಾಂಗ್ರೆಸ್'ನಲ್ಲಿ ಸಂಚಲನ ಸೃಷ್ಟಿಸಿದೆ. ದಿಡೀರ್ ಬೆಳವಣಿಗೆಯಲ್ಲಿ ಅಧ್ಯಕ್ಷರ ರೇಸ್'ನಲ್ಲಿ ಖರ್ಗೆ ಹೆಸರು ಕೇಳಿ ಬರುತ್ತಿದ್ದು, ಭಾರೀ ಕುತೂಹಲ ಕೆರಳಿಸಿದೆ.
ಇಷ್ಟು ದಿನ ಕೆಪಿಸಿಸಿ ಅಧ್ಯಕ್ಷರ ರೇಸ್‌ನಲ್ಲಿಇಂಧನ ಸಚಿವ ಡಿ.ಕೆ ಶಿವಕುಮಾರ್, ಜಲಸಂಪನ್ಮೂಲ ಸಚಿವ ಎಂ. ಬಿ ಪಾಟೀಲ್, ಮಾಜಿ ಸಚಿವ ಎಸ್ ಆರ್ ಪಾಟೀಲ್, ಮುನಿಯಪ್ಪ ಇದ್ದರು. ಆದ್ರೆ ಇದೀಗ ಕೆಪಿಸಿಸಿ ರೇಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರು ದಿಢೀರ್ ಸೇರ್ಪಡೆಗೊಡಿದೆ.
ಯಾರಿಗೆ ಕೆಪಿಸಿಸಿ ಪಟ್ಟ?
ದಿಡೀರ್ ಬೆಳವಣಿಗೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ರಾಜಕಾರಣಕ್ಕೆ ಮರಳುವ ಸಾಧ್ಯತೆಯಿದೆ. ಪರಮೇಶ್ವರ್ ಅವ್ರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ, ಬೇರೆಯವರಿಗೆ ಅಧ್ಯಕ್ಷ ಪಟ್ಟ ಕಟ್ಟಿದ್ರೆ, ಮುಂಬರುವ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ದಲಿತ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವ್ರಿಗೆ ಅಧ್ಯಕ್ಷ ಪಟ್ಟ ಕಟ್ಟುವ ಮೂಲಕ ಪರಮೇಶ್ವರ್ ಅವರನ್ನು ಸಮಾಧಾನಪಡಿಸಬಹುದು. ಅಥವಾ ನೀವೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಿರ ಅಂತಾನೂ ಹೈಕಮಾಂಡ್ ಹೇಳಬಹುದು. ಖರ್ಗೆ ನೇಮಕ ಸಂಬಂಧ ಪರಮೇಶ್ವರ್ ಜೊತೆ ಚರ್ಚಿಸಬಹುದು. ಅಥವಾ ಸಿಎಂ ಕ್ಯಾಂಡಿಡೇಟ್, ದೆಹಲಿಯಲ್ಲಿಯೇ ಬೀಡುಬಿಟ್ಟಿರುವ ಎಂಬಿ ಪಾಟೀಲ್ ರನ್ನೇ ಅಧ್ಯಕ್ಷರನ್ನಾಗಿ ಮಾಡಿ, ಅವರಿಗೆ ಮಾರ್ಗದರ್ಶನ ನೀಡಿ ಅಂತಾನೂ ಹೈಕಮಾಂಡ್ ಪರಮೇಶ್ವರ್'ಗೆ ಸೂಚನೆ ನೀಡಬಹುದು.
ಅದೇನೇ ಇರಲಿ ಪರಮೇಶ್ವರ್ ದಿಡೀರ್ ದೆಹಲಿಗೆ ತೆರಳಿರೋದು ರಾಜ್ಯ ಕಾಂಗ್ರೆಸ್'ನಲ್ಲಿ ಸಂಚಲನ ಮೂಡಿಸಿದ್ದಂತೂ ಸುಳ್ಳಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.