
ಬೀದರ್: ಬಿಜೆಪಿ ಸೇರ್ಪಡೆಗೆ ಮುಂದಾಗಿರುವ ಬಸವಕಲ್ಯಾಣ ಶಾಸಕ ಮಲ್ಲಿಕಾರ್ಜುನ್ ಖೂಬಾ ಅವರು ಮಂಗಳವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬೆಳಗ್ಗೆ 10 ಗಂಟೆಗೆ ರಾಣೆಬೆನ್ನೂರಿನಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರನ್ನು ಭೇಟಿಯಾಗಿ ರಾಜಿನಾಮೆ ಸಲ್ಲಿಸಲಿದ್ದಾರೆ.
ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿರುವ ಅವರು, ಒಂದೆರಡು ದಿನದಲ್ಲಿ ಬಿಜೆಪಿ ರಾಜ್ಯ ಮುಖಂಡರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿ ಪಡಿಸಿಕೊಳ್ಳುತ್ತೇನೆ. ಮಂಗಳವಾರ ರಾಜಿನಾಮೆ ಸಲ್ಲಿಸುವ ಉದ್ದೇಶದಿಂದ ಸ್ಪೀಕರ್ ಅವರ ಭೇಟಿಗೆ ಸಮಯ ಪಡೆದುಕೊಂಡಿದ್ದೇನೆ. ಬೆಳಗ್ಗೆ 10 ಗಂಟೆಗೆ ರಾಣೆಬೆನ್ನೂರಿಗೆ ತೆರಳಿ ರಾಜಿನಾಮೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.