ಆಯ್ತು ಕೆಲಸಕ್ಕೆ ಬನ್ನಿ: ವೈದ್ಯರೆದುರು ಮಂಡಿಯೂರಿದ ಮಮತಾ!

Published : Jun 15, 2019, 06:42 PM ISTUpdated : Jun 15, 2019, 07:38 PM IST
ಆಯ್ತು ಕೆಲಸಕ್ಕೆ ಬನ್ನಿ: ವೈದ್ಯರೆದುರು ಮಂಡಿಯೂರಿದ ಮಮತಾ!

ಸಾರಾಂಶ

ಸರ್ಕಾರಿ ಕಿರಿಯ ವೈದ್ಯರ ಪ್ರತಿಭಟನೆ ಮುಂದೆ ಮಂಡಿಯೂರಿದ ಮಮತಾ| ಪ್ರತಿಭಟನಾನಿರತರ ಎಲ್ಲಾ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಮಮತಾ| ಹಲ್ಲೆಗೊಳಗಾದ ವೈದ್ಯ ಪರಿಬಾಹಾ ಮುಖ್ಯೋಪಾಧ್ಯಾಯ ಭೇಟಿಗೆ ಮಮತಾ ಸಮ್ಮತಿ| ಪ್ರತಿಭಟನೆ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ವೈದ್ಯರಿಗೆ ಮನವಿ|

ಕೋಲ್ಕತ್ತಾ(ಜೂ.15): ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ಕಿರಿಯ ವೈದ್ಯರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿರುವುದಾಗಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

"

ವೈದ್ಯರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದ್ದು, ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ. ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಮಮತಾ, ಹಲ್ಲೆಗೊಳಗಾದ ಕಿರಿಯ ವೈದ್ಯ ಪರಿಬಾಹಾ ಮುಖ್ಯೋಪಾಧ್ಯಾಯ ಅವರನ್ನು ಭೇಟಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕೂಡಲೇ ಪ್ರತಿಭಟನೆ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಪ.ಬಂಗಾಳ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೇ ಕಿರಿಯ ವೈದ್ಯರ ಎಲ್ಲಾ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವುದಾಗಿ ಮಮತಾ ಭರವಸೆ ನೀಡಿದ್ದಾರೆ.

ರೋಗಿಯ ಸಾವಿನ ಹಿನ್ನೆಲೆಯಲ್ಲಿ ಆತನ ಸಂಬಂಧಿಕರು ವೈದ್ಯ ಪರಿಬಾಹಾ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ, ಸರ್ಕಾರಿ ಕಿರಿಯ ವೈದ್ಯರು ಕಳೆದ 5 ದಿನಗಳಿಂದ ಪ.ಬಂಗಾಳದಲ್ಲಿ ಭಾರೀ ಪ್ರತಿಭಟನೆ ನಡೆಸಸುತ್ತಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್