
ಕೋಲ್ಕತಾ : ಟಿಎಂಸಿ ಸಂಸದ ಸೌಮಿತ್ರ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಮತ್ತೊಂದು ಶಾಕ್ ಕಾದಿದೆ. ಬಿಷ್ಣುಪುರ್ ಸಂಸದ ಅನುಪಮ್ ಹಜ್ರಾ ಕೂಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದೆ.
ಸೌಮಿತ್ರ ಖಾನ್ ಸೇರ್ಪಡೆಯಾದ ಬಳಿಕ ಮಾತನಾಡಿದ ಬಿಜೆಪಿ ಮುಖಂಡರೋರ್ವರು ಇನ್ನೂ 6 ಮಂದಿ ತಮ್ಮ ಸಂಪರ್ಕದಲ್ಲಿ ಇರುವುದಾಗಿ ಹೇಳಿದ್ದಾರೆ. ಅರ್ಪಿತಾ ಘೋಷ್, ಸತಾಬ್ದಿ ರಾಯ್ ಅವರೂ ಕೂಡ ಟಿಎಂಸಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈ ನಾಯಕರೆಲ್ಲರೂ ಕೂಡ ಬಿಜೆಪಿ ಹಾದಿಯಲ್ಲಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರೋಧಿ ವೇದಿಕೆ ಒಂದನ್ನು ರಚನೆ ಮಾಡುವ ಸಲುವಾಗಿ ರ್ಯಾಲಿಯೊಂದನ್ನು ಹಮ್ಮಿಕೊಂಡಿದ್ದಾರೆ. ಜನವರಿ 19 ರಂದು ಕೋಲ್ಕತಾದಲ್ಲಿ ರ್ಯಾಲಿ ನಡೆಯಲಿದ್ದು, ರ್ಯಾಲಿಗೆ 10 ದಿನ ಇರುವ ಮುನ್ನವೇ ಟಿಎಂಸಿ ಮುಖಂಡರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ.
ಇನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡ ಹಿನ್ನೆಲೆಯಲ್ಲಿ ಸೌಮಿತ್ರಾ ಖಾನ್ ಹಾಗೂ ಹಜ್ರಾ ಅವರನ್ನು ಪಕ್ಷದಿಂದ ವಜಾಗೊಳಿಸಿತ್ತು. ಅಲ್ಲದೇ ಇಬ್ಬರೂ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವ ಬಗ್ಗೆ ಮಾಹಿತಿ ಬಂದ ಕ್ರಮ ಕೈಗೊಂಡಿದ್ದಾಗಿ ಹೇಳಲಾಗಿತ್ತು.
ಅಲ್ಲದೇ ಈ ಇಬ್ಬರು ಬಿಜೆಪಿ ಸೇರುವ ಬಗ್ಗೆ ಸೂಕ್ಷ್ಮವೊಂದು ತಿಳಿದ ಬೆನ್ನಲ್ಲೇ ಇಬ್ಬರು ಮುಖಂಡರಿಗೆ ಮುಂದಿನ ಲೋಕಸಭಾ ಚುನಾವಣೆ ಟಿಕೆಟ್ ನೀಡುವ ಬಗ್ಗೆಯೂ ಪಕ್ಷದಲ್ಲಿ ಪ್ರಸ್ತಾಪವಾಗಿರಲಿಲ್ಲ. ಇದೀಗ ಟಿಎಂಸಿಯಿಂದ ದೂರ ಸರಿದು ಬಿಜೆಪಿ ಸೇರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.