ಮಹಾಮೈತ್ರಿ: ಗೌಡರನ್ನು ಭೇಟಿಯಾದ ಮಮತಾ

By Web DeskFirst Published Aug 1, 2018, 6:23 PM IST
Highlights

ದೆಹಲಿಯ ಕರ್ನಾಟಕ ಭವನದಲ್ಲಿ ದೇವೇಗೌಡರನ್ನು ಭೇಟಿಯಾಗಿದ್ದು, ಇಬ್ಬರು ನಾಯಕರು ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ಮಹಾಮೈತ್ರಿಯ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ.

ನವದೆಹಲಿ[ಆ.01]: ಮಹಾ ಮೈತ್ರಿ ಬಗ್ಗೆ ಚರ್ಚಿಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇ ಗೌಡ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿ ಭೇಟಿಯಾಗಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ದೇವೇಗೌಡರನ್ನು ಭೇಟಿಯಾಗಿದ್ದು, ಇಬ್ಬರು ನಾಯಕರು ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ಮಹಾಮೈತ್ರಿಯ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಕೇಂದ್ರದಲ್ಲಿರುವ ಬಿಜೆಪಿಯನ್ನು ಮಣಿಸಲು ಎಲ್ಲ ರಾಜ್ಯಗಳ ವಿರೋಧ ಪಕ್ಷಗಳು ಒಗ್ಗೂಡಿಸಲು ಈ ಭೇಟಿ ಹೆಚ್ಚು ಮಹತ್ವ ಪಡೆದುಕೊಂಡಿದೆ ಎನ್ನಲಾಗಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಹುಲ್, ಸೋನಿಯಾ, ಉತ್ತರ ಪ್ರದೇಶದ ಮಾಯಾವತಿ, ಅಖಿಲೇಶ್ ಯಾದವ್,ಅರವಿಂದ್ ಕೇಜ್ರಿವಾಲ್, ಚಂದ್ರಬಾಬು ನಾಯ್ಡು ಸೇರಿದಂತೆ ವಿವಿಧ ಪಕ್ಷಗಳ ವಿರೋಧ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಉತ್ತರ ಪ್ರದೇಶದ ಪ್ರಮುಖ ಪಕ್ಷಗಳಾದ ಸಮಾಜವಾದಿ ಪಕ್ಷ ಹಾಗೂ ಬಿಎಸ್ಪಿ ಕೂಡ ಬಹುತೇಕ ಮೈತ್ರಿ ಮಾಡಿಕೊಂಡಿವೆ. 

click me!