ಎನ್‌ಆರ್‌ಸಿ ಸರಿಯಿಲ್ಲ: ಗೃಹ ಸಚಿವರ ಮುಂದೆ ಮಮತಾ ಬೆವರಲಿಲ್ಲ!

Published : Sep 19, 2019, 05:20 PM IST
ಎನ್‌ಆರ್‌ಸಿ ಸರಿಯಿಲ್ಲ: ಗೃಹ ಸಚಿವರ ಮುಂದೆ ಮಮತಾ ಬೆವರಲಿಲ್ಲ!

ಸಾರಾಂಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಪ.ಬಂಗಾಳ ಸಿಎಂ| ಎನ್‌ಆರ್‌ಸಿ ಕುರಿತು ಅಮಿತ್ ಶಾ ಮುಂದೆ ಅಸಮಾಧಾನ ಹೊರಹಾಕಿದ ಮಮತಾ ಬ್ಯಾನರ್ಜಿ| ಎನ್‌ಆರ್‌ಸಿ ಪ್ರಕ್ರಿಯೆಯನ್ನು ಪುನರ್‌ ಪರಿಶೀಲನೆ ಮಾಡುವಂತೆ ಮನವಿ ಮಾಡಿದ ಮಮತಾ| ಪಶ್ವಿಮ ಬಂಗಾಳದಲ್ಲಿ ಕೇಂದ್ರದ ಅನಗತ್ಯ ಹಸ್ತಕ್ಷೇಪದ ಕುರಿತು ಪ್ರಸ್ತಾಪ|

ನವದೆಹಲಿ(ಸೆ.19): ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಅವೈಜ್ಞಾನಿಕವಾಗಿದ್ದು, ಎನ್‌ಆರ್‌ಸಿ ಪಟ್ಟಿಯಿಂದ 19 ಲಕ್ಷ ಜನರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮಮತಾ, ಎನ್‌ಆರ್‌ಸಿ ಪ್ರಕ್ರಿಯೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಎನ್‌ಆರ್‌ಸಿ ಪ್ರಕ್ರಿಯೆಯನ್ನು ಪುನರ್‌ ಪರಿಶೀಲನೆ ಮಾಡುವಂತೆ ಶಾ ಅವರಿಗೆ ಮನವಿ ಮಾಡಿದರು.

ಇದೇ ವೇಳೆ ಪಶ್ವಿಮ ಬಂಗಾಳದಲ್ಲಿ ಕೇಂದ್ರದ ಅನಗತ್ಯ ಹಸ್ತಕ್ಷೇಪದ ಕುರಿತು ಪ್ರಸ್ತಾಪಿಸಿದ ಮಮತಾ, ಈ ಅನಗತ್ಯ ರಾಜಕೀಯ ಹಸ್ತಕ್ಷೇಪಗಳು ಕೇಂದ್ರ-ರಾಜ್ಯ ಸರ್ಕಾರಗಳನ್ನು ಮತ್ತಷ್ಟು ದೂರ ತಳ್ಳುತ್ತಿವೆ ಎಂದು ಶಾ ಅವರಿಗೆ ಮನವರಿಕೆ ಮಾಡಿದರು.

ನಿನ್ನೆ(ಸೆ.18) ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದ ಮಮತಾ ಬ್ಯಾನರ್ಜಿ, ರಾಜ್ಯದ ಹೆಸರು ಬದಲಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು