ಬೆಂಕಿಯ ಜೊತೆ ಆಟವಾಡಬೇಡಿ; ಆರ್'ಎಸ್;ಎಸ್'ಗೆ ಮಮತಾ ಬ್ಯಾನರ್ಜಿ ಖಡಕ್ ವಾರ್ನಿಂಗ್

Published : Sep 16, 2017, 06:06 PM ISTUpdated : Apr 11, 2018, 12:35 PM IST
ಬೆಂಕಿಯ ಜೊತೆ ಆಟವಾಡಬೇಡಿ; ಆರ್'ಎಸ್;ಎಸ್'ಗೆ ಮಮತಾ ಬ್ಯಾನರ್ಜಿ ಖಡಕ್ ವಾರ್ನಿಂಗ್

ಸಾರಾಂಶ

ದುರ್ಗಾಪೂಜೆ ಸಂದರ್ಭದಲ್ಲಿ ಶಾಂತಿ ಕದಡುವ ಆರ್’ಎಸ್’ಎಸ್ ಹಾಗೂ ಅದರ ವಿಶ್ವ ಹಿಂದೂ ಪರಿಷತ್ ಹಾಗೂ ಅದರ ಅಂಗಸಂಸ್ಥೆಗಳಾದ ಭಜರಂಗದಳ, ವಿಶ್ವಹಿಂದೂ ಪರಿಷತ್’ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬೆಂಕಿ ಜೊತೆ ಆಟವಾಡಬೇಡಿ ಎಂದು ಖಡರ್ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ (ಸೆ.16): ದುರ್ಗಾಪೂಜೆ ಸಂದರ್ಭದಲ್ಲಿ ಶಾಂತಿ ಕದಡುವ ಆರ್’ಎಸ್’ಎಸ್ ಹಾಗೂ ಅದರ ವಿಶ್ವ ಹಿಂದೂ ಪರಿಷತ್ ಹಾಗೂ ಅದರ ಅಂಗಸಂಸ್ಥೆಗಳಾದ ಭಜರಂಗದಳ, ವಿಶ್ವಹಿಂದೂ ಪರಿಷತ್’ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬೆಂಕಿ ಜೊತೆ ಆಟವಾಡಬೇಡಿ ಎಂದು ಖಡರ್ ಎಚ್ಚರಿಕೆ ನೀಡಿದ್ದಾರೆ.

ವಿಜಯದಶಮಿ ದಿನ ರಾಜ್ಯಾದ್ಯಂತ ಆಯುಧ ಪೂಜೆ ಆಚರಿಸಲು ವಿಎಚ್’ಪಿ ನಿರ್ಧರಿಸಿದ್ದು ಇದಕ್ಕೆ ಮಮತಾ ಬ್ಯಾನರ್ಜಿ ತೀವ್ರ ಗರಂ ಆಗಿದ್ದಾರೆ. ಬೆಂಕಿ ಜೊತೆ ಆಟವಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಂತಹ ಘಟನೆಗಳೇನಾದರೂ ಕಂಡು ಬಂದರೆ ತಡೆಯಿರಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ವಿಜಯ ದಶಮಿ ದಿನ ಆಯುಧ ಪೂಜೆಯನ್ನು ನಡೆಸಲು ಮುಂದಾದರೆ ಅದನ್ನು ತಡೆಯಿರಿ ಎಂದು ಮಮತಾ ಬ್ಯಾನರ್ಜಿ ಪೊಲೀಸರಿಗೆ ಸೂಚನೆ ನೀಡಿದ್ದರು. ಅ.01 ರಂದು ಮೊಹರಂ ಇರುವ ಪ್ರಯುಕ್ತ  ಸೆ. 30 ರ ದಿನ ಸಂಜೆ  6 ಗಂಟೆ  ನಂತರ ದುರ್ಗಾಮೂರ್ತಿಯನ್ನು ಮುಳುಗಿಸುವಂತಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಮಮತಾ ಬ್ಯಾನರ್ಜಿ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆಂದು ಬಿಜೆಪಿ ಆರೋಪಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ