
ನವದೆಹಲಿ (ಜೂ.29): ಗೋ ರಕ್ಷಣೆ ಹೆಸರಿನಲ್ಲಿ ಜನರ ಮಾಡುವುದನ್ನು ಖಂಡಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಗೋರಕ್ಷಕರಿಗೆ ಹೇಳಿದ ಕೆಲವೇ ಗಂಟೆಗಳಲ್ಲಿ ಗೋ ಮಾಂಸ ಸಾಗಿಸುತ್ತಿದ್ದಾರೆನ್ನುವ ಸಂಶಯದ ಮೇಲೆ ಒಬ್ಬರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ತನ್ನ ಕಾರಿನಲ್ಲಿ ಗೋಮಾಂಸವನ್ನು ಸಾಗಿಸುತ್ತಿದ್ದಾನೆ ಎನ್ನುವ ಸಂಶಯದ ಮೇಲೆ 45 ವರ್ಷದ ಮುಸ್ಲೀಂ ವ್ಯಕ್ತಿಯೊಬ್ಬನನ್ನು 100 ಮಂದಿಯ ಗುಂಪೊಂದು ಏಕಾಏಕಿ ದಾಳಿ ಮಾಡಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್’ನ ರಾಮ್’ಘರ್ ನಲ್ಲಿ ನಡೆದಿದೆ.
ವ್ಯಾಪಾರಿ ಅಲ್ಲಾಮುದ್ದೀನ್ ಅಕಾ ಅಜ್ಘರ್’ನನ್ನು ಹಲ್ಲೆಗಾರರಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದರೂ ನಡೆಯುತ್ತಿದ್ದರು. ಅವರು ಆಘಾತದಿಂದ ಮೃತಪಟ್ಟಿರಬಹುದೆಂದು ಪೊಲೀಸರು ಹೇಳಿದ್ದಾರೆ.
ಅಲ್ಲಾಮುದ್ದೀನ್ ಅಕಾರವರ ಕಾರಿನಿಂದ ಮಾಂಸವನ್ನು ಹೊರತೆಗೆದು ರಸ್ತೆಗೆಸೆದು, ಅವನಿಗೆ ಹೊಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲದಲ್ಲಿ ಓಡಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.