ಪ್ರಚೋದನಕಾರಿ ವಾಟ್ಸಪ್ ವಿಡಿಯೋ ಸ್ಟೇಟಸ್: ಸೆರೆ

Published : Oct 09, 2017, 03:54 PM ISTUpdated : Apr 11, 2018, 01:00 PM IST
ಪ್ರಚೋದನಕಾರಿ ವಾಟ್ಸಪ್ ವಿಡಿಯೋ ಸ್ಟೇಟಸ್: ಸೆರೆ

ಸಾರಾಂಶ

ವಾಟ್ಸಪ್ ಸ್ಟೇಟಸ್‌ನಲ್ಲಿ ಪ್ರಚೋದನಕಾರಿ ವೀಡಿಯೋ ಹಾಕಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು ಸೈಬರ್ ಕ್ರೈಂ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.

ಉಳ್ಳಾಲ: ವಾಟ್ಸಪ್ ಸ್ಟೇಟಸ್‌ನಲ್ಲಿ ಪ್ರಚೋದನಕಾರಿ ವೀಡಿಯೋ ಹಾಕಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು ಸೈಬರ್ ಕ್ರೈಂ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.

ಫಜೀರು ಅಡ್ಕ ನಿವಾಸಿ ಮೋಹನ್ ಆಚಾರ್ಯ (30) ಬಂಧಿತ. ಕೇರಳ ಭಾಗದಲ್ಲಿ ಅಪ್ರಾಪ್ತೆ ಬಾಲಕಿಗೆ ಅತ್ಯಾಚಾರ ಮಾಡಿದ ಆರೋಪಿಯನ್ನು ಥಳಿಸಿ ಕೊಂದ ವಿಡಿಯೋವನ್ನು ವಾಟ್ಸಪ್ ಸ್ಟೇಟಸ್‌ನಲ್ಲಿ ಹಾಕಿ, ಇನ್ನು ಮುಂದೆ ಫಜೀರು ಸಮೀಪ ದನ ಕಳವು ನಡೆಸಿದವರಿಗೆ ಇದೇ ರೀತಿ ಥಳಿಸಿ ಕೊಲ್ಲಬೇಕು’ ಅನ್ನುವ ಬೆದರಿಕೆಯೊಡ್ಡಿರುವ ಸಂದೇಶವನ್ನು ಹಾಕಿದ್ದ.

ಇದರ ವಿರುದ್ಧ ಪಜೀರು ನಿವಾಸಿ ಲ್ಯಾನ್ಸಿ ಡಿಸೋಜ ಅನ್ನುವವರು ದಾಖಲಿಸಿದ ದೂರಿನಂತೆ ವಿಚಾರಣೆ ನಡೆಸಿದ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಸೈಬರ್ ಕ್ರೈಂ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ