
ತುಮಕೂರು(ಅ.12): ಜಮೀನಿನಲ್ಲಿ ಕಾಂಪೌಂಡ್ ಕಟ್ಟಿದ ವಿಚಾರದಲ್ಲಿ ಪರಸ್ಪರ ಇಬ್ಬರಲ್ಲಿ ಜಗಳ ನಡೆದು ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ತುಮಕೂರು ತಾಲೂಕಿನ ಬುಗುಡನಹಳ್ಳಿಯಲ್ಲಿ ನಡೆದಿದೆ.
ಬುಗುಡನಹಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣನ ಮೇಲೆ ಈ ಊರಿನ ವೆಂಕಟರಾಮು ಎನ್ನುವವರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಲಕ್ಷ್ಮೀ ನಾರಾಯಣನ ಜಮೀನಿನಲ್ಲಿ ವೆಂಕಟರಾಮು ಕಾಂಪೌಂಡ್ ಕಟ್ಟಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಲು ಹೋದಾಗ ವೆಂಕಟರಾಮು ಲಕ್ಷ್ಮೀನಾರಾಯಣ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಪರಿಣಾಮ ಲಕ್ಷ್ಮೀನಾರಾಯಣನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಳ್ಳಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.