ಮದ್ಯದ ಅಮಲಿನಲ್ಲಿ ನಾಲ್ಕನೆ ಮಹಡಿಯಿಂದ ಬಿದ್ದು ಯುವಕ ಸಾವು

Published : Jan 22, 2018, 12:43 PM ISTUpdated : Apr 11, 2018, 12:50 PM IST
ಮದ್ಯದ ಅಮಲಿನಲ್ಲಿ ನಾಲ್ಕನೆ ಮಹಡಿಯಿಂದ ಬಿದ್ದು ಯುವಕ ಸಾವು

ಸಾರಾಂಶ

ಸ್ನೇಹಿತರ ಜೊತೆ ಪಾರ್ಟಿ ಮಾಡಿದ ಯುವಕ ಮದ್ಯದ ಅಮಲಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು (ಜ.22): ಸ್ನೇಹಿತರ ಜೊತೆ ಪಾರ್ಟಿ ಮಾಡಿದ ಯುವಕ ಮದ್ಯದ ಅಮಲಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸಾದರ ಮಂಗಲ ಸ್ಲಂ ಬೋರ್ಡ್’ನಲ್ಲಿ ಬೈಯಪ್ಪನಹಳ್ಳಿ ನಿವಾಸಿಯಾದ  22 ವರ್ಷದ ರಾಜಶೇಖರ್ ಎಂಬ ಯುವಕ ಸಾವಿಗೀಡಾಗಿದ್ದಾನೆ.

ಇಂದು ಬೆಳಗ್ಗೆ ಚೆನ್ನೈಗೆ ತೆರಳಬೇಕಾದ ಹಿನ್ನೆಲೆಯಲ್ಲಿ ರಾಜಶೇಖರ್ ನಿನ್ನೆ ರಾತ್ರಿ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದು, ಸ್ನೇಹಿತರು ವಾಪಸ್ ತೆರಳಿದ ಮೇಲೆ ಆಯತಪ್ಪಿ  ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಕಾಡುಗೋಡಿ ಪೊಲೀಸರು ಸ್ಥಳಕ್ಕಾಗಮಿಸಿದಾಗ  ಕಟ್ಟಡದ ಮೇಲೆ  ಆತನ ಚಪ್ಪಲಿ ಹಾಗೂ ಇತರೆ ವಸ್ತುಗಳು ಪತ್ತೆಯಾಗಿವೆ. ಈ ಸಂಬಂಧ ಸದ್ಯ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ