
ಕಾಶ್ಮೀರ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ನಿವಾಸಕ್ಕೆ ಅಕ್ರಮವಾಗಿ ನುಸುಳಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದಾರೆ. ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಬಟಿಂಡಾ ಪ್ರದೇಶದಲ್ಲಿ ಫಾರೂಕ್ ಅಬ್ದುಲ್ಲಾ ಅವರ ಮನೆಯ ಗೇಟ್ ನಲ್ಲಿ ತನ್ನ ಎಸ್ ಯುವಿಯನ್ನು ಚಲಾಯಿಸಿಕೊಂಡು ಬಂದಿದ್ದಾನೆ.
ಈ ವೇಳೆ ಆತನನ್ನು ತಡೆದರೂ ಕೂಡ ಮನೆಯ ಗೇಟ್ ಒಳಗೆ ತೆರಳಿದ್ದು, ಈ ವೇಳೆ ಭದ್ರತಾ ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆದಿದೆ. ಇದಾದ ಬಳಿಕ ಅಕ್ರಮವಾಗಿ ಆತ ಮನೆಯ ಗೇಟ್ ನುಸಳಿ ತೆರಳಿದ್ದರಿಂದ ಭದ್ರತಾ ಸಿಬ್ಬಂದಿ ಆತನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಈ ವೇಳೆ ಫಾರೂಕ್ ಅಬ್ದುಲ್ಲಾ ಅವರು ನಿವಾಸದಲ್ಲಿ ಇರಲಿಲ್ಲ ಎನ್ನಲಾಗಿದೆ. ಈತನನ್ನು ಮುರ್ಫಾಸ್ ಶಾ ಎಂದು ಗುರತಿಸಲಾಗಿದ್ದು, ವಿಐಪಿ ಗೇಟ್ ಮೂಲಕ ಆತ ಮನೆ ಪ್ರವೇಶಿಲು ಯತ್ನಿಸಿದ್ದನೆನ್ನಲಾಗಿದೆ.
ಅಕ್ರಮವಾಗಿ ಮನೆ ಪ್ರವೇಶಿಸುವ ವೇಳೆ ಆತನ ಬಳಿ ಯಾವುದೇ ರೀತಿಯ ಆಯುಧಗಳು ಇರಲಿಲ್ಲ. ಈ ಪ್ರಕರಣ ಸಂಬಂಧ ಸದ್ಯ ತನಿಖೆ ಕೈಗೊಳ್ಳಲಾಗಿದೆ ಎಂದು ಜಮ್ವಾಲ್ ಐಜಿಪಿ ಎಸ್ ಡಿ ಸಿಂಗ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.