
ಪಾಟ್ನಾ(ಅ.11): ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರ ಮೇಲೆ ವ್ಯಕ್ತಿಯೊಬ್ಬ ಚಪ್ಪಲಿ ಎಸೆದ ಘಟನೆ ನಡೆದಿದೆ.
ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿತೀಶ್ ವೇದಿಕೆ ಮೇಲೆ ಆಸೀನರಾಗಿದ್ದಾಗ, ಯುವಕನೊಬ್ಬ ಚಪ್ಪಲಿ ಎಸೆದಿದ್ದಾನೆ. ಕೂಡಲೇ ಆತನನ್ನು ವಶಕ್ಕೆ ಪಡೆದ ಪೊಲೀಸರು, ಆತನನ್ನು ಸ್ಥಳದಿಂದ ದೂರ ಕರೆದುಕೊಂಡು ಹೋಗಿದ್ದಾರೆ.
ಯುವಕ ಎಸೆದ ಚಪ್ಪಲಿ ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ ಸಭಿಕರ ಮೇಲೆ ಬಿದ್ದಿದ್ದು, ನಿತೀಶ್ ಕುಮಾರ್ ಅವರಿಗೆ ತಾಗಲಿಲ್ಲ ಎಂದು ವರದಿಗಳು ತಿಳಿಸಿವೆ.
ಚಪ್ಪಲಿ ಎಸೆದ ವ್ಯಕ್ತಿಯನ್ನು ಚಂದನ್ ಎಂದು ಗುರುತಿಸಲಾಗಿದೆ. ಯುವಕ ಚಪ್ಪಲಿ ಎಸೆಯುತ್ತಿದ್ದಂತೇ ಕ್ರೋಧಗೊಂಡ ಕಾರ್ಯಕರ್ತರು, ಆತನ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದ್ದು, ಸದ್ಯ ಯುವಕನನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.