ಫೇಸ್ ಬುಕ್ ಗೆಳತಿಗಾಗಿ ಹೆತ್ತವರನ್ನೇ ಕೊಂದ ಪಾಪಿ

Published : May 23, 2018, 01:28 PM IST
ಫೇಸ್ ಬುಕ್ ಗೆಳತಿಗಾಗಿ ಹೆತ್ತವರನ್ನೇ ಕೊಂದ ಪಾಪಿ

ಸಾರಾಂಶ

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿಯನ್ನು ವಿವಾಹವಾಗಲು ಅನುಮತಿ ನೀಡದ ಪೋಷಕರನ್ನು ಯುವಕನೋರ್ವ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಎಂಬ 26 ವರ್ಷದ ಯುವಕ  ಪ್ರೇಯಸಿಗಾಗಿ ತನ್ನ ಪೋಷಕರನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ (ಮೇ.23): ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿಯನ್ನು ವಿವಾಹವಾಗಲು ಅನುಮತಿ ನೀಡದ ಪೋಷಕರನ್ನು ಯುವಕನೋರ್ವ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಅಬ್ದುಲ್ ರೆಹಮಾನ್ ಎಂಬ 26 ವರ್ಷದ ಯುವಕ  ಪ್ರೇಯಸಿಗಾಗಿ ತನ್ನ ಪೋಷಕರನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಪೋಷಕರ ಸುಪರ್ದಿಯಲ್ಲಿದ್ದ ಆಸ್ತಿಯನ್ನು ಪಡೆಯಲು ಹತ್ಯೆ ಮಾಡಿರುವುದಾಗಿ ರೆಹಮಾನ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ.
 
ಆರೋಪಿ ರೆಹಮಾನ್ ಗೆ ಈ ಮೊದಲೇ ವಿವಾಹವಾಗಿದ್ದು, ವಿಚ್ಛೇದನ ಪಡೆದಿದ್ದಾನೆ. ಈ ನಡುವೆ  2017 ರಲ್ಲಿ ಪೋಷಕರ ಇಚ್ಛೆಯಂತೆ ಮತ್ತೊಬ್ಬ ಮಹಿಳೆಯನ್ನು ವಿವಾಹವಾಗಿದ್ದಾನೆ. ಆದರೆ ನಂತರ ಫೇಸ್ ಬುಕ್ ಗೆಳತಿ ಕುರಿತು ಪೋಷಕರಿಗೆ ಮಾಹಿತಿ ನೀಡಿದ್ದಾನೆ. ಆದರೆ ಆಕೆ ಜೊತೆ ವಿವಾಹಕ್ಕೆ ಪೋಷಕರು ಒಪ್ಪದಿದ್ದಾಗ ಅವರ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!