
ಚೆನೈ[ಜೂ.೫]: ಸಲಿಂಕಾಮಿಯೋರ್ವ ತನ್ನ ಗೆಳೆಯನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತಮಿಳುನಾಡಿನ ರಾಜಧಾನಿ ಚೆನೈನಲ್ಲಿ ನಡೆದಿದೆ. ಇಲ್ಲಿನ ರಿಚಿ ಸ್ಟ್ರೀಟ್ ನ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸರವಣನ್ ಎಂಬಾತ ತನ್ನ ಸಲಿಂಗಿ ಗೆಳೆಯ ಪ್ರಭು ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂತರ ಅದೇ ಅಂಗಡಿಯ ಫ್ಯಾನ್‌ಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಭು ಮತ್ತು ಸರವಣನ್ ಇಬ್ಬರೂ ಸಲಿಂಗಿಗಳಾಗಿದ್ದು, ಈ ವಿಷಯ ಅವರಿಬ್ಬರ ಮನೆಯವರಿಗೂ ತಿಳಿದಿತ್ತು. ಆದರೆ ಈ ಸಂಬಂಧಕ್ಕೆ ಆತನ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಅಂಗಡಿ ಮಾಲೀಕ ಎಷ್ಟೇ ಬುದ್ದಿವಾದ ಹೇಳಿದ್ದರೂ ಕೇಳದ ಸರವಣನ್, ಮತ್ತೆ ಮತ್ತೆ ಪ್ರಭುವನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಕೊನೆಗೆ ಕಳೆದ ಭಾನುವಾರ ರಾತ್ರಿ ಪ್ರಭು ಅಂಗಡಿ ಬಂದ್ ಮಾಡಿ ಮಲಗಿದ್ದಾಗ ಆತನ ಮೇಲೆ ದಾಳಿ ಮಾಡಿದ ಸರವಣನ್. ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಪ್ರಭುವನ್ನು ಕೊಂದ ಬಳಿಕ ಸರವಣನ್ ಕೂಡ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರ ಮೃತದೇಹಗಳನ್ನೂ ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.