
ನೋಯ್ಡಾ: ದುಶ್ಚಟಗಳು ವ್ಯಕ್ತಿ ಎಷ್ಟೇ ಐಶಾರಾಮಿ ಸ್ಥಿತಿಯಲ್ಲಿದ್ದರೂ ಹೇಗೆಲ್ಲ ಅಪಾಯಕ್ಕೆ ಕಾರಣವಾಗಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆ. ಐಷಾರಾಮಿ ಕಾರು ಜಾಗ್ವಾರ್ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ದಾರಿ ಮಧ್ಯೆ ತಿಂದಿದ್ದ ಗುಟ್ಕಾ ಉಗಿಯಲು ಹೋಗಿ, ಕಾರು ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ್ದಾನೆ.
ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಶಾಂತ್(27) ಎಂಬಾತ ಸುಮಾರು ಗಂಟೆಗೆ 120 ಕಿ.ಮೀ. ವೇಗದಲ್ಲಿ ಕಾರು ಚಲಾಯಿಸುತ್ತಿದ್ದ. ಈ ವೇಳೆ ಆತ ತಲೆ ಹೊರಹಾಕಿ ಗುಟ್ಕಾ ಉಗಿಯಲು ಯತ್ನಿಸಿದ್ದು, ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.